ಹುಬ್ಬಳ್ಳಿ: ನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ ರಾಜ್ಯ ಸರ್ಕಾರದ ಯುವ ನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಆರಂಭಿಸಲಾಗಿದೆ.
ಈ ಯೋಜನೆಯಡಿ ನೋಂದಣಿಯಾಗುವ ಸ್ನಾತಕ, ಸ್ನಾತಕೋತ್ತರ ಪದವೀಧರರಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ ಮಾಸಿಕ 1500 ರೂ. ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ. 2023 ಮತ್ತು 2024ರಲ್ಲಿ ತೇರ್ಗಡೆಯಾದ ಸಂಸ್ಥೆಯ ವಿದ್ಯಾರ್ಥಿಗಳು ಡಿಪ್ಲೊಮಾ ಅಂಕಪಟ್ಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಪಡಿತರ ಚೀಟಿ ಹಾಗೂ ಆಧಾರ್ ಲಿಂಕ್ಡ್ ಇರುವ ಮೊಬೈಲ್ ಫೋನ್ ನಂಬರ್ನೊಂದಿಗೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ಗೆ ಆಗಮಿಸಿ ನೋಂದಣಿ ಮಾಡಿಸಿ ಅಭಿಯಾನದ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಾಚಾರ್ಯರು ಕೋರಿದ್ದಾರೆ.