ಚಾಮರಾಜನಗರ: ಪ್ರಸ್ತುತ ಸಂದರ್ಭ ಪ್ರತಿಯೊಬ್ಬರೂ ಒತ್ತಡದಲ್ಲಿ ಬದುಕು ನಡೆಸುತ್ತಿದ್ದಾರೆ. ಮುಕ್ತಿ ಪಡೆಯಲು ಯೋಗ ಪರಿಣಾಮಕಾರಿಯಾಗಿದೆ ಎಂದು ಚಾಮರಾಜನಗರ ವಿಶ್ವ ವಿದ್ಯಾಲಯದ ರಾಜ್ಯಶಾಸ್ತ್ರ ಉಪನ್ಯಾಸಕಿ ಭಾಗ್ಯಮ್ಮ ಹೇಳಿದರು.
ನಗರ ಹೊರವಲಯದಲ್ಲಿರುವ ವಿಶ್ವ ವಿದ್ಯಾಲಯದ ಆವರಣದಲ್ಲಿ ಚಾಮರಾಜನಗರ ವಿಶ್ವವಿದ್ಯಾಲಯ ಹಾಗೂ ಎನ್‌ಎಸ್‌ಎಸ್ ಘಟಕದಿಂದ ಆಯೋಜಿಸಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಮನುಷ್ಯನು ಹಲವಾರು ಸಮಸ್ಯೆ ಮತ್ತು ಸವಾಲುಗಳಿಗೆ ಸಿಲುಕಿ ದೈಹಿಕವಾಗಿ, ಮಾನಸಿಕವಾಗಿ ಕುಗ್ಗುತ್ತಿದ್ದಾನೆ. ಆಧ್ಯಾತ್ಮಿಕವಾಗಿ ತನ್ನ ಆರೋಗ್ಯವನ್ನು ಸುಧಾರಿಸಿಕೊಳ್ಳುವಲ್ಲಿ ಹಿಂದೆ ಸರಿದಿದ್ದಾನೆ. ಹಾಗಾಗಿ ಇಂತಹ ಹಲವಾರು ಸಮಸ್ಯೆಗಳಿಗೆ ಯೋಗ ದಿವ್ಯ ಔಷಧವಾಗಿದೆ ಎಂದು ತಿಳಿಸಿದರು. ಚಾಮರಾಜನಗರ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಆರ್.ಮಹೇಶ್ ಇತರರು ಇದ್ದರು.