ಹುಬ್ಬಳ್ಳಿ: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ನಗರದ ವಿವಿಧ ಈದ್ಗಾ ಮೈದಾನಗಳಲ್ಲಿ ಕನಿಷ್ಠ 5 ಜನರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕೆಂದು ನಗರದ ಅಂಜುಮನ್ ಇಸ್ಲಾಂ ಸಂಸ್ಥೆಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಅವರು, ನಗರದ ಕಿತ್ತೂರ ಚನ್ನಮ್ಮ ವೃತ್ತ ಬಳಿಯ ಮೈದಾನ, ಹಳೇಹುಬ್ಬಳ್ಳಿ, ಮಂಟೂರ ರಸ್ತೆ, ಉಣಕಲ್ಲ, ಅಮರಗೋಳ ಹಾಗೂ ತಾರಿಹಾಳ ಈದ್ಗಾ ಮೈದಾನದಲ್ಲಿ ನಮಾಜ್ ಮಾಡಲು ಅವಕಾಶ ನೀಡಬೇಕು ಎಂದು ಕೋರಿದ್ದಾರೆ.
ಕರ್ನಾಟಕ ವಕ್ಪ್ ಬೋರ್ಡ್ ಮಾರ್ಗಸೂಚಿ ಪ್ರಕಾರ ಐದು ಜನರಿಗೆ ನಿತ್ಯ ಹಾಗೂ ಶುಕ್ರವಾರ ನಮಾಜ್ ಮಾಡಲು ವಿವಿಧ ಮಸೀದಿಗಳಲ್ಲಿ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಲ್ಲಿ ವರ್ಷದಲ್ಲಿ ಎರಡು ಬಾರಿ ಚನ್ನಮ್ಮ ವೃತ್ತದ ಮೈದಾನದಲ್ಲಿ ನಮಾಜ್ ಮಾಡಲು ಅವಕಾಶ ಇದೆ. ಹಾಗಾಗಿ ರಂಜಾನ್ ಸಂದರ್ಭದಲ್ಲಿ ಪ್ರಾರ್ಥನೆಗೆ ಐವರಿಗೆ ಅವಕಾಶ ನೀಡಬೇಕೆಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಯೂಸೂಫ್ ಸವಣೂರ, ಉಪಾಧ್ಯಕ್ಷ ಅಲ್ತಾಫ್ ಕಿತ್ತೂರ, ಅಲ್ತಾಫ್ ಹಳ್ಳೂರ ಇತರರು ಮನವಿ ಸಲ್ಲಿಸಿದ್ದಾರೆ.
EndFragment