ಜಿಲ್ಲೆ

ರಂಭಾಪುರಿ ಶ್ರೀಗಳಿಂದ ಇಷ್ಟಲಿಂಗ ಮಹಾಪೂಜೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಅಧಿಕ ಶ್ರಾವಣ ಮಾಸ ನಿಮಿತ್ತ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಮಂಗಳವಾರದಿಂದ ಮೂರು ದಿನ ನೌಬಾದ್ ಸಮೀಪದ ಶ್ರೀ ಜಗದ್ಗುರು ಪಂಚಾಚಾರ್ಯ ಪುಣ್ಯಾಶ್ರಮದಲ್ಲಿ ಇಷ್ಟಲಿಂಗ ಮಹಾಪೂಜೆ, ಸಾಮೂಹಿಕ ಅಯ್ಯಾಚಾರ, ಲಿಂಗದೀಕ್ಷೆ ಹಾಗೂ ಧರ್ಮ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ.
ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರ ಹಾಗೂ ಶ್ರೀ ಜಗದ್ಗುರು ಪಂಚಾಚಾರ್ಯ ಶಿಕ್ಷಣ ಚಾರಿಟೇಬಲ್ ಟ್ರಸ್ಟ್ ನಿಂದ ವಿವಿಧ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಮಂಗಳವಾರ ಬೆಳಗ್ಗೆ 8ಕ್ಕೆ ಅಯ್ಯಾಚಾರ ಮತ್ತು ಲಿಂಗದೀಕ್ಷೆ, ಮಧ್ಯಾಹ್ನ 12.15ಕ್ಕೆ ಕೇಂದ್ರ ಸಚಿವ ಭಗವಂತ ಖೂಬಾ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ಶ್ರೀ ವಿರೂಪಾಕ್ಷ ಶಿವಾಚಾರ್ಯ, ಶ್ರೀ ರಾಜೇಶ್ವರ ಶಿವಾಚಾರ್ಯ, ಶ್ರೀ ಶಿವಾನಂದ ಶಿವಾಚಾರ್ಯ ಸಮ್ಮುಖ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅಧ್ಯಕ್ಷತೆ ವಹಿಸುವರು. ಶಾಸಕ ಡಾ.ಸಿದ್ದು ಪಾಟೀಲ್, ಎಂಎಲ್ಸಿ ರಘುನಾಥರಾವ್ ಮಲ್ಕಾಪುರೆ, ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ, ಸೂರ್ಯಕಾಂತ ನಾಗಮಾರಪಳ್ಳಿ ಇತರರು ಪಾಲ್ಗೊಳ್ಳುವರು.
ಜು.26ರಂದು ಮಧ್ಯಾಹ್ನ 12ಕ್ಕೆ ಧರ್ಮ ಜಾಗೃತಿ ಸಮಾರಂಭ ಜರುಗಲಿದೆ. ಶ್ರೀ ಶಿವಲಿಂಗ ಶಿವಾಚಾರ್ಯ ಹೆಡಗಾಪುರ, ಶ್ರೀ ರುದ್ರಮುನಿ ಶಿವಾಚಾರ್ಯ ಚಾಂಬೋಳ, ಶ್ರೀ ಶಿವಾನಂದ ಶಿವಾಚಾರ್ಯ ತಮಲೂರ ಸಾನ್ನಿಧ್ಯ ವಹಿಸುವರು. ಶಾಸಕರಾದ ಪ್ರಭು ಚವ್ಹಾಣ್, ಶರಣು ಸಲಗರ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಈಶ್ವರಸಿಂಗ್ ಠಾಕೂರ್, ಉಮಾಕಾಂತ ನಾಗಮಾರಪಳ್ಳಿ, ಡಾ.ಬಲಬೀರಸಿಂಗ್, ಗುರುನಾಥ ಜ್ಯಾಂತಿಕರ್ ಇತರರು ಭಾಗವಹಿಸುವರು. ಜು.27ರಂದು ಮಧ್ಯಾಹ್ನ 12.15ಕ್ಕೆ ಇಷ್ಟಲಿಂಗ ಮಹಾಪೂಜೆ ಮತ್ತು ಸಮಾರೋಪ ಶ್ರೀ ಗುರುಲಿಂಗ ಶಿವಾಚಾರ್ಯ ಚಿಟಗುಪ್ಪ, ಶ್ರೀ ಶಿವಾನಂದ ಶಿವಾಚಾರ್ಯ, ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸಾನ್ನಿಧ್ಯದಲ್ಲಿ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಮ್ ಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್, ಅರವಿಂದಕುಮಾರ ಅರಳಿ, ಮಾಜಿ ಶಾಸಕ ಅಶೋಕ ಖೇಣಿ, ವಿಜಯಸಿಂಗ್, ಡಾ.ಗುರಮ್ಮ ಸಿದ್ದಾರಡ್ಡಿ ಇತರರು ಭಾಗವಹಿಸುವರು.