ಜಿಲ್ಲೆ

ರಂಭಾಪುರಿಶ್ರೀ ಆಶೀರ್ವಾದ ಪಡೆದ ಸಚಿವ ಖಂಡ್ರೆ

ಭಾಲ್ಕಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಾ ಪ್ರಧಾನ ಕಾರ್ಯದರ್ಶಿಯೂ ಆದ ಅರಣ್ಯ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಆಶೀರ್ವಾದ ಪಡೆದರು.
ಬೆಂಗಳೂರಿನಲ್ಲಿ ಮಂಗಳವಾರ ಪೂಜ್ಯರ ಭೇಟಿಯಾದ ಅವರು, ಕೇಂದ್ರ ಸರ್ಕಾರದ ಓಬಿಸಿ ಪಟ್ಟಿಯಲ್ಲಿ ಸಮಾಜವನ್ನು ಸೇರಿಸುವ ಅಗತ್ಯದ ಬಗ್ಗೆ ಚರ್ಚಿಸಿದರು. ಗ್ರಾಮೀಣ ಪ್ರದೇಶದಲ್ಲಿ ವೀರಶೈವ ಲಿಂಗಾಯತ ಸಮುದಾಯ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿದ್ದು, ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುವೆ ಎಂದು ಹೇಳಿದರು.