ರಾಯಚೂರು: ತುರ್ತು ಸಂದರ್ಭದಲ್ಲಿ ರಕ್ತದ ಕೊರತೆಯಿಂದ ಹಲವಾರು ಜನರು ಸಾವಿಗೀಡಾಗುತ್ತಿದ್ದು, ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿತುಕೊಂಡು ರಕ್ತದಾನ ಮಾಡುವ ಮೂಲಕ ಇನ್ನೊಬ್ಬರ ಜೀವ ಉಳಿಸುವ ಕೆಲಸ ಮಾಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ಸ್ಥಳೀಯ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಮಂಗಳವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಎಲ್ಲ ಇಲಾಖೆಗಳ ಅಕಾರಿಗಳು, ಸಿಬ್ಬಂದಿಮತ್ತು ಸಂಘ ಸಂಸ್ಥೆಗಳ ಪದಾಕಾರಿಗಳು ರಕ್ತದಾನ ಮುಂದೆ ಬಂದಿರುವುದು ಶ್ಲಾಘನೀಯ ಎಂದರು.
ರಕ್ತದಾನದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ರಕ್ತದಾನಕ್ಕೆ ಪ್ರೇರಣೆ ನೀಡುವ ಕೆಲಸವನ್ನು ನಿರಂತರವಾಗಿ ನಡೆಸಬೇಕು. ರಕ್ತದಾನದಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. ಆರೋಗ್ಯದಲ್ಲಿ ಸುಧಾರಣೆಯಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಬಸನಗೌಡ ದದ್ದಲ್, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ, ಎಸ್ಪಿ ಬಿ.ನಿಖಿಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಆರ್.ಶಿವಕುಮಾರ, ಡಿಎಚ್‌ಒ ಡಾ.ಸುರೇಂದ್ರಬಾಬು, ಜಿಲ್ಲಾ ಶಸ ಚಿಕಿತ್ಸಕ ಡಾ.ಎನ್.ವಿಜಯಶಂಕರ ಉಪಸ್ಥಿತರಿದ್ದರು.