ಬಾಗೇಪಲ್ಲಿ : ರಕ್ತವನ್ನು ಕೃತಕವಾಗಿ ಉತ್ಪಾದನೆ ಮಾಡಲು ಸಾಧ್ಯವಿಲ್ಲದ ಕಾರಣ ರಕ್ತವನ್ನು ದಾನ ಪಡೆಯಬೇಕಾಗದ ಅನಿವಾರ್ಯತೆ ಇದೆ ಎಂದು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಆರ್.ವೆಂಕಟೇಶ್ ತಿಳಿಸಿದರು.
ತಾಲೂಕಿನ ತಿಮ್ಮಂಪಲ್ಲಿ ಗ್ರಾಮ ಪಂಚಾಯಿತಿಯ ಜಿ.ಮದ್ದೇಪಲ್ಲಿ ಮದನ ಗೋಕುಲ ಶಾಲೆಯಲ್ಲಿ ಬಿಜೆಪಿ ಮಂಡಲ ಹಾಗೂ ಬೆಂಗಳೂರು ರಾಷ್ಟ್ರೋತ್ಥಾನ ಪರಿಷತ್ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
ಕರೊನಾ ಕಾಲದಲ್ಲಿ ರಕ್ತದ ಬೇಡಿಕೆ ಹೆಚ್ಚಾಗಿದ್ದು ಬಿಜೆಪಿ ಪಕ್ಷದಿಂದ ರಕ್ತದಾನ ಶಿಬಿರ ಏರ್ಪಡಿಸಿ ರಕ್ತ ಸಂಗ್ರಹಣೆ ಮಾಡಲಾಗುತ್ತಿದೆ. ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ದೇಹವು ಉಲ್ಲಾಸವಾಗಿರುತ್ತದೆ ಹಾಗೂ ಹೃದಯಾಘಾತ ತಡೆಯಲು ಸಾಧ್ಯವಾಗುತ್ತದೆ ಎಂದರು.
ಶಿಬಿರದಲ್ಲಿ 162 ಯೂನಿಟ್ ರಕ್ತ ಸಂಗ್ರಹವಾಯಿತು.ಬಿಜೆಪಿ ಜಿಲ್ಲಾಧ್ಯಕ್ಷ ಆರ್.ರಾಮಲಿಂಗಪ್ಪ, ಸ್ಲಂ ಮೋರ್ಚಾ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನರೆಡ್ಡಿ, ಮಂಡಲಾಧ್ಯಕ್ಷ ಆರ್.ಪ್ರತಾಪ್, ಮಾಜಿ ಅಧ್ಯಕ್ಷ ಚೌಡರೆಡ್ಡಿ, ಎಪಿಎಂಸಿ ಅಧ್ಯಕ್ಷ ಸೋಮಶೇಖರರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಭಾಕರರೆಡ್ಡಿ, ಗೋಪಾಲರೆಡ್ಡಿ, ಕಾರ್ಯದರ್ಶಿ ಎಂ.ಆರ್.ಸ್ರೀನಿವಾಸ, ಉಪಾಧ್ಯಕ್ಷ ಬಿ.ಎಸ್.ಲೋಕೇಶ್, ಮುಖಂಡರಾದ ಶ್ರೀನಿವಾಸ್, ಶ್ರೀನಿವಾಸಯ್ಯ, ನಾಗೇಶ್, ಎಸ್.ವಿ.ವೆಂಕಟರವಣ ಇತರರಿದ್ದರು.