ಜಿಲ್ಲೆ

ರಕ್ತದಾನದಿಂದ ಆರೋಗ್ಯ ಕಾಪಾಡಿ

ಬಳ್ಳಾರಿ : ಪ್ರತಿಯೊಬ್ಬರು ರಕ್ತದಾನ ಮಾಡುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಶ್ರೀರಾಮರಂಗಾಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಭರತ್ ಹೇಳಿದರು.
ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಸಮುದಾಯ ಭವನದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಶ್ರೀರಾಮರಂಗಾಪುರ ಸಮುದಾಯ ಆರೋಗ್ಯ ಕೇಂದ್ರ, ಸುಗ್ಗೇನಹಳ್ಳಿ ಉಪ ಆರೋಗ್ಯ ಕೇಂದ್ರ ಹಾಗೂ ಸ್ವಾಮಿ ವಿವೇಕಾನಂದ ರಕ್ತ ಬಂಡಾರ ಸಹಯೋಗದೊಂದಿಗೆ ಸೋಮವಾರ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಪಂ ವ್ಯಾಪ್ತಿಯ ಎಲ್ಲ ಜನರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಿ ಜೀವ ಉಳಿಸುವಲ್ಲಿ ಪಾತ್ರರಾಗಬೇಕು ಎಂದು ಹೇಳಿದರು.