ಜಿಲ್ಲೆ

ರಕ್ತದಾನದಿಂದ ಆರೋಗ್ಯ ವೃದ್ಧಿ ; ಡಾ.ಸುರೇಶ್

ಅರಸೀಕೆರೆ : ನಿಯಮಿತವಾಗಿ ರಕ್ತದಾನ ಮಾಡುವುರಿಂದ ಆರೋಗ್ಯ ಸಮತೋಲನ ಕಾಪಾಡಿಕೊಳ್ಳಲು ಅನುಕೂಲವಾಗಲಿದೆ ಎಂದು ಸರ್ಕಾರಿ ಜೆ.ಸಿ.ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸುರೇಶ್ ಹೇಳಿದರು.

ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 30 ನೇ ವರ್ಷದ ಸಂಸ್ಮರಣೆ ಹಿನ್ನಲೆಯಲ್ಲಿ ತರಳಬಾಳು ಯುವ ವೇದಿಕೆ ವತಿಯಿಂದ ಜೆ.ಸಿ.ಆಸ್ಪತ್ರೆಯಲ್ಲಿ ಗುರುವಾರ ಆಯೋಜಿಸಿದ್ದ ಉಚಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು.

ಎಲ್ಲ ದಾನಗಳಿಗಿಂತಲೂ ರಕ್ತದಾನ ಅತ್ಯಂತ ಶ್ರೇಷ್ಟವಾದುದು. ಪ್ರತಿಯೊಬ್ಬರೂ ಇಂತಹ ಮಹತ್ವದ ಕಾರ್ಯದಲ್ಲಿ ಪಾಲ್ಗೊಳ್ಳುವುದರಿಂದ ಮತ್ತೊಂದು ಜೀವಕ್ಕೆ ಆಸರೆ ನೀಡಿದಂತಾಗುತ್ತದೆ ಎಂದರು.

ಬಿಜೆಪಿ ತಾಲೂಕು ಉಪಾಧ್ಯಕ್ಷ ಅಣ್ಣಾಯಕನಹಳ್ಳಿ ವಿಜಯಕುಮಾರ್ ಮಾತನಾಡಿ, ಸೆ.24 ರಂದು ಶನಿವಾರ ಸಿರಿಗೆರೆಯಲ್ಲಿ ಶ್ರೀಗಳ ಸಂಸ್ಮರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ತರಳ ಬಾಳು ಯುವ ವೇದಿಕೆ ಅಧ್ಯಕ್ಷ ಲಿಂಗರಾಜ್, ಫಿಸಿಯೋ ಮಧು, ನಗರ ಯೋಜನಾ ಪ್ರಾಧಿಕಾರದ ನಿದೇರ್ಶಕ ಯಾದಾಪುರ ತೇಜಸ್, ಡಾ.ಷಡಕ್ಷರಿ ಸೇರಿ ಹಲವರು ಪಾಲ್ಗೊಂಡಿದ್ದರು.

ಹತ್ತಾರು ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.