ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದರು.  
ಜಿಲ್ಲೆ

ರನ್ನ ಸಾಂಸ್ಕೃತಿಕ ವೈಭವಕ್ಕೆ ಸಕಲ ಸಜ್ಜು

ಬಾಗಲಕೋಟೆ: ಜಿಲ್ಲೆಯ ಮುಧೋಳದಲ್ಲಿ ಫೆ.೨೨ ರಿಂದ ೨೪ ವರೆಗೆ ಜರುಗಲಿರುವ ಮೂರು ದಿನಗಳ ರನ್ನ ವೈಭವಕ್ಕೆ ಎಲ್ಲ ರೀತಿಯಿಂದ ಸಜ್ಜಾಗಿದೆ. ರನ್ನನಗರಿಯಲ್ಲಿ ಸಾಹಿತ್ಯ, ಸಂಸ್ಕೃತಿ, ಕಲೆ ತವರು ಮನೆಯಾಗಿ ರಾಜ್ಯವನ್ನು ಗಮನ ಸೆಳೆಯಲಿದೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ಜಿಲ್ಲೆಯ ಮುಧೋಳ ನೀರಿಕ್ಷಣಾ ಮಂದಿರಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರನ್ನ ಪ್ರತಿಷ್ಠಾನ ಮುಧೋಳ ಸಹಯೋಗದಲ್ಲಿ ಮೂರು ದಿನಗಳ ಕಾಲ ನಡೆಯುವ ರನ್ನ ವೈಭವವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ರೀತಿಯಲ್ಲಿ ಸಜ್ಜಾಗಿದೆ. ರನ್ನ ವೈಭವದ ಅಂಗವಾಗಿ ಹಮ್ಮಿಕೊಂಡ ತಾಲೂಕಾ, ಜಿಲ್ಲಾ ಹಾಗೂ ರಾಜ್ಯ ಮಟ್ಟದ ರನ್ನರಥಯಾತ್ರೆ ಯಶಸ್ವಿಯಾಗಿ ನಡೆಯುತ್ತಿದ್ದು, ರಾಜ್ಯ ಮಟ್ಟದ ರಥ ಶನಿವಾರ ರನ್ನ ಬೆಳಗಲಿಗೆ ಬಂದು ತಲುಪಲಿದೆ ಎಂದು ತಿಳಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಕ್ರೀಡಾಕೂಟಗಳನ್ನು ಸಹ ಹಮ್ಮಿಕೊಳ್ಳಲಾಗಿದೆ. ಅಂತರರಾಜ್ಯ ಮಹಿಳಾ ಮತ್ತು ಪುರುಷ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಮಹಾರಾಷ್ಟç, ಪಂಜಾಬ, ದೆಹಲಿ, ತಮಿಳುನಾಡು, ಕೇರಳ ರಾಜ್ಯ ಸೇರಿದಂತೆ ಇತರೆ ರಾಜ್ಯದ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಇದರ ಜೊತೆಗೆ ಸಂಗ್ರಾಣಿ ಕಲ್ಲು, ಗುಂಡು ಹಾಗೂ ಚೀಲ ಎತ್ತುವುದು, ಮಲ್ಲಕಂಬ, ಹಗ್ಗ ಜಗ್ಗಾಟದಂತಹ ಸ್ಪರ್ಧೆಗಳು ನಡೆಸಲಾಗುತ್ತಿದೆ ಎಂದರು.

ಮೂರು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಕವಿ ಚಕ್ರವರ್ತಿ ರನ್ನನ ಸಾಹಿತ್ಯ ಕುರಿತಂತೆ ವಿಚಾರಗೋಷ್ಠಿ, ಕವಿಗೋಷ್ಠಿ ಏರ್ಪಡಿಸಲಾಗುತ್ತಿದೆ. ರಾಷ್ಟçಮಟ್ಟದ ಹಾಗೂ ರಾಜ್ಯ ಮಟ್ಟದ ಶ್ರೇಷ್ಠ ಕಲಾವಿದರಿದÀ ಓಡಿಸ್ಸಾ ನೃತ್ಯ, ಕಥಕ್ಕಳಿ, ಖ್ಯಾತ ಗಾಯಕರಾದ ಗುರುಕಿರಣ, ಅರ್ಜುನ ಜನ್ಯ, ರಾಜೇಶ ಕೃಷ್ಣನ್, ವಿಜಯ ಪ್ರಕಾಶ, ಅನುಪಮಾ ಭಟ್, ಆರ್.ಜೆ.ರಶೀದ್ ತಂಡದಿAದ ಸಂಗೀತ ರಸದೌಥನ ನೀಡಲಿದ್ದಾರೆ. ಈ ಕಾರ್ಯಕ್ರಮಗಳಲ್ಲಿ ಚಲನಚಿತ್ರನಟಿ ರಚಿತಾ ರಾಮ್, ನಿರೂಪಕಿ ಅನುಶ್ರೀ ಪಾಲ್ಗೊಳ್ಳಲಿದ್ದಾರೆ. ಸರ್ಕಾರದಿಂದ ೨ ಕೋಟಿ ರೂ. ಬಿಡುಗಡೆಯಾಗಿದ್ದು, ಪ್ರಾವಾಸೋದ್ಯಮ ಇಲಾಖೆಯಿಂದ ೨೦ ಲಕ್ಷ ರೂ. ಬಿಡುಗಡೆಯಾಗಿದೆ ಎಂದರು.

ಫೆ.೨೨ ರಂದು ರನ್ನ ಬೆಳಗಲಿಯ ಕವಿಚಕ್ರವರ್ತಿ ರನ್ನನ ವೇದಿಕೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಚಾಲನೆ ನೀಡಿದರೆ, ಎರಡನೇ ದಿನದ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಭಾಗವಹಿಸಲಿದ್ದಾರೆ. ಮೂರನೇ ದಿನ ದಿನ ಸಮಾರೋಪ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯನವರು ಆಗಮಿಸಿ ಮುಕುಟ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅಧ್ಯಕ್ಷತೆ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಪ್ರೀಯಾಂಕ ಖರ್ಗೆ, ಜವಳಿ, ಸಕ್ಕರೆ ಮತ್ತು ಕೃಷಿ ಸಚಿವ ಶಿವಾನಂದ ಪಾಟೀಲ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ÷್ಮÃ ಹೆಬ್ಬಾಳಕರ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಅಥಣಿ ಶಾಸಕ ಲಕ್ಷ÷್ಮಣ ಸವದಿ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಶಾಸಕರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ ಎಂದು ಹೇಳಿದರು.

ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ಯಾಳಕರ, ಜಿ.ಪಂ ಸಿಇಒ ಶಶಿಧರ ಕುರೇರ, ಹೆಚ್ಚುವರಿ ಪೊಲೀಸ್ ವರಿಷ್ಠಾಽಕಾರಿ ಪ್ರಸನ್ನ ದೇಸಾಯಿ, ಎಸಿ ಶ್ವೇತಾ ಬಿಡಿಕರ ಇತರರು ಇದ್ದರು.