?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ರಸಗೊಬ್ಬರ ಬೆಲೆ ಏರಿಕೆಗೆ ವಿರೋಧ

ಹನೂರು: ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಶುಕ್ರವಾರ ಹನೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಯೂತ್ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಿತು.

ಪಟ್ಟಣದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸೇರಿದ ಪದಾಧಿಕಾರಿಗಳು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ತೆರಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಯೂತ್ ಕಾಂಗ್ರೆಸ್ ಅಧ್ಯಕ್ಷ ಗುಂಡಾಪುರ ಮಾದೇಶ್ ಮಾತನಾಡಿ, ಸರ್ಕಾರದಿಂದ ರೈತರಿಗೆ ಸಮರ್ಪಕವಾಗಿ ಸವಲತ್ತುಗಳು ಸಿಗುತ್ತಿಲ್ಲ. ಇದರಿಂದ ಕೃಷಿಯಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತಿಲ್ಲ. ಇದರಿಂದ ಸಮಸ್ಯೆ ನಡುವೆಯೂ ಕೃಷಿ ಮಾಡುವಂತಾಗಿದೆ. ಇನ್ನು ಹನೂರು ಭಾಗದಲ್ಲಿ ಹೆಚ್ಚಿನ ರೈತರು ಮಳೆಯನ್ನೇ ಆಶ್ರಯಿಸಿ ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿದ್ದಾರೆ. ಮಳೆಯಾಗದ ಹಿನ್ನೆಲೆಯಲ್ಲಿ ನಷ್ಟ ಅನುಭವಿಸುತ್ತಿದ್ದಾರೆ ಎಂದರು.

ಸರ್ಕಾರ ರೈತರಿಗೆ ಪೂರಕವಾಗಿ ಹೊಸ ಯೋಜನೆಗಳನ್ನು ಜಾರಿಗೊಳಿಸಬೇಕು. ಬಿತ್ತನೆ ಬೀಜ, ರಸಗೊಬ್ಬರವನ್ನು ಕಡಿಮೆ ದರದಲ್ಲಿ ನೀಡುವುದರ ಮೂಲಕ ಕೃಷಿಗೆ ಅನುಕೂಲ ಕಲ್ಪಿಸಬೇಕು. ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ ಹಿಂತೆಗೆದುಕೊಳ್ಳಬೇಕು. ಈ ಮೂಲಕ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಮಂಜುನಾಥ್, ಉಪಾಧ್ಯಕ್ಷ ಜಯಚಂದ್ರ, ಹನೂರು ಉಪಾಧ್ಯಕ್ಷ ಮಂಜೇಶ್, ಟೌನ್ ಅಧ್ಯಕ್ಷ ಸಂತೋಷ್, ರಾಮಾಪುರ ಅಧ್ಯಕ್ಷ ರಮೇಶ್, ಪದಾಧಿಕಾರಿಗಳಾದ ಮಂಜುಳಾ, ಜ್ಯೋತಿ ಇದ್ದರು.