ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಕಚೇರಿ ವತಿಯಿಂದ ಐಗೂರು ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಲಿಖಿತ ರಸಪ್ರಶ್ನೆ ಸ್ಪರ್ಧೆ ವಿಜೇತರಿಗೆ ವಲಯ ಅರಣ್ಯಾಧಿಕಾರಿ ಚೇತನ್ ಬಹುಮಾನ ವಿತರಿಸಿದರು. ಜಗದೀಶ್, ಸತೀಶ್ ಕುಮಾರ್, ಯಶ್ವಂತ್ ಕುಮಾರ್ ಇದ್ದರು. 
ಜಿಲ್ಲೆ

ರಸಪ್ರಶ್ನೆ ಸ್ಪರ್ಧೆ ವಿಜೇತರಿಗೆ ಬಹುಮಾನ

ಸೋಮವಾರಪೇಟೆ: ವಲಯ ಅರಣ್ಯಾಧಿಕಾರಿ ಕಚೇರಿ ವತಿಯಿಂದ ಐಗೂರು ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಲಿಖಿತ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಅರಣ್ಯ ಮತ್ತು ವನ್ಯಜೀವಿಗಳು, ವಿವಿಧ ಜಾತಿಯ ಮರಗಳು, ಪ್ರಾಣಿ- ಪಕ್ಷಿಗಳು, ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ನೀಡಲಾಗಿತ್ತು. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಚೇತನ್, ಉಪವಲಯ ಅರಣ್ಯಾಧಿಕಾರಿಗಳಾದ ಜಗದೀಶ್, ಸತೀಶ್ ಕುಮಾರ್, ಭರಮಪ್ಪ, ಮುಖ್ಯಶಿಕ್ಷಕ ಯಶ್ವಂತ್ ಕುಮಾರ್, ಸಹಶಿಕ್ಷಕರು ಇದ್ದರು.