ಚಿಕ್ಕಮಗಳೂರಿನ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಸನ್ಮಾನಿಸಲಾಯಿತು. ಕೆ.ಸಿ.ಶಂಕರ್, ರವೀಶ್ ಕ್ಯಾತನಬೀಡು, ಡಿ.ಎಂ.ಮAಜುನಾಥ ಸ್ವಾಮಿ ಮತ್ತಿತರರಿದ್ದರು. 
ಜಿಲ್ಲೆ

ರಸಪ್ರಶ್ನೆ ಸ್ಪರ್ಧೆಯಲ್ಲಿ ಕುವೆಂಪು ವಿದ್ಯಾನಿಕೇತನದ ಸುಪ್ರೀತ್ ಪ್ರಥಮ

ಚಿಕ್ಕಮಗಳೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಆನ್‌ಲೈನ್‌ನಲ್ಲಿ ನಡೆಸಿದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ನಗರದ ಕುವೆಂಪು ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿ ಸುಪ್ರೀತ್, ಮೂಡಿಗೆರೆ ಬೆಥನಿ ಪ್ರೌಢಶಾಲೆಯ ವಿದ್ಯಾರ್ಥಿ ಮಹಮ್ಮದ್ ಝಹೆರ್, ಮೂಡಿಗೆರೆ ತಾಲೂಕು ಅಂಗಡಿ ಸರ್ಕಾರಿ ಪ್ರೌಢಶಾಲೆಯ ಹರಿಪ್ರಿಯಾ ಪ್ರಥಮ ಸ್ಥಾನ ಪಡೆದಿದ್ದಾರೆ.

ನಗರದ ಕುವೆಂಪು ವಿದ್ಯಾನಿಕೇತನ ಶಾಲೆಯ ಆರ್.ಪಿ.ದೃತಿ, ಮೂಡಿಗೆರೆ ಬೆಥನಿ ಶಾಲೆಯ ಹರ್ಷಿತ ಮತ್ತು ಅರ್ಮಾನ್ ನವಾಜ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕುವೆಂಪು ಶಾಲೆಯ ಟಿ.ಎಸ್.ಯಷ್ಠಿಕಾ, ಮೂಡಿಗೆರೆ ಬೆಥನಿ ಶಾಲೆಯ ರಚನಾ ಸುಧನ್, ಆಲ್ದೂರು ಪೂರ್ಣಪ್ರಜ್ಞ ಶಾಲೆಯ ಎಚ್.ಎಂ.ಶ್ರಾವ್ಯ ತೃತೀಯ ಸ್ಥಾನ ಗಳಿಸಿದ್ದಾರೆ.

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ನಗರದ ಕುವೆಂಪು ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿ ವಿ.ಆರ್.ಗೋವರ್ಧನ್, ಮೂಡಿಗೆರೆ ಬೆಥನಿ ಶಾಲೆಯ ಅಶ್ವಿನ್ ಎಚ್.ಎಸ್. ಗೌಡ ಸಮಾಧಾನಕರ ಬಹುಮಾನ ಪಡೆದಿದ್ದಾರೆ.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಕುವೆಂಪು ವಿದ್ಯಾನಿಕೇತನ ಶಾಲೆಯ ಕಾರ್ಯದರ್ಶಿ ಕೆ.ಸಿ.ಶಂಕರ್, ನಮ್ಮ ರಾಷ್ಟç ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಬೇಕಾದರೆ ದೇಶದ ಜನತೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ದೇಶ ಪ್ರಗತಿಪಥದಲ್ಲಿ ಹಿಂದುಳಿದಿರುವುದಕ್ಕೆ ಮೂಲ ಕಾರಣ ನಾವು ವಿಜ್ಞಾನವನ್ನು ಕಡೆಗಣಿಸಿರುವುದು. ಜಾತಿ, ಧರ್ಮ, ಮತಗಳ ಹೆಸರಿನಲ್ಲಿ ನಾವು ಮಕ್ಕಳ ಮನಸ್ಸುಗಳನ್ನು ಒಡೆದಿz್ದೆÃವೆ. ಹಾಗಾಗಿ ಅವರಲ್ಲಿ ವೈಜ್ಞಾನಿಕ ಮನೋಭಾವ, ವೈಜ್ಞಾನಿಕ ಚಿಂತನೆ ಬೆಳೆಯುತ್ತಿಲ್ಲ ಎಂದು ವಿಷಾದಿಸಿದರು.

ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ರವೀಶ್ ಕ್ಯಾತನಬೀಡು ಮಾತನಾಡಿ, ವೈಜ್ಞಾನಿಕ ಮನೋಭಾವ ಬೆಳೆಯಬೇಕಾದರೆ ಮಕ್ಕಳು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು. ಮನೆಯ ಕಪಾಟಿನಲ್ಲಿ ಪುಸ್ತಕಗಳನ್ನು ಸಂಗ್ರಹಿಸಿ ಇಡಬೇಕು. ದಿನಪತ್ರಿಕೆಗಳನ್ನು ಪ್ರತಿನಿತ್ಯ ತಪ್ಪದೇ ಓದಬೇಕು ಎಂದು ಕಿವಿಮಾತು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಂ. ಮಂಜುನಾಥ ಸ್ವಾಮಿ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಪ್ರತಿವರ್ಷ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಲಾಗುತ್ತಿದೆ. ಈ ಬಾರಿ ಸ್ಪರ್ಧೆಯಲ್ಲಿ ಜಿಲ್ಲಾಧ್ಯಂತ ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ತಿಳಿಸಿದರು.

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಮಾವಿನಕೆರೆ ದಯಾನಂದ್ ಅಧ್ಯಕ್ಷತೆ ವಹಿಸಿದ್ದರು. ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬೈರೇಗೌಡ, ಕಾಫಿ ಬೆಳೆಗಾರ ಪರಮೇಶ್, ಮೂಡಿಗೆರೆ ಕಸಾಪ ಅಧ್ಯಕ್ಷ ಆರ್.ಪ್ರಕಾಶ್, ಶಿಕ್ಷಕ ಮಂಜಪ್ಪ ದೊಡ್ಮನಿ, ಪ್ರಶಾಂತಿ ಕುವೆಲೋ, ವೇಣಿ, ದುರ್ಗೇಶ್, ಶಾಂತಕುಮಾರ್, ಗೋವರ್ಧನ್ ಉಪಸ್ಥಿತರಿದ್ದರು.