ಜಿಲ್ಲೆ

ರಸ್ತೆ ಅಪಘಾತದಲ್ಲಿ ಯುವಕ ಸಾವು

ಧರ್ಮರಾಜ ರಾಮನಗೌಡ ಪಾಟೀಲ

ಬೆಳಗಾವಿ: ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಬಳಿ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಯುವಕ ಮೃಪಟ್ಟಿರುವ ಘಟನೆ ನಡೆದಿದೆ.

ಗೋಕಾಕ ತಾಲೂಕಿನ ಯಕ್ಕುಂಡಿ ಗ್ರಾಮದ ಪುರುಷೋತ್ತಮ ಭಜಂತ್ರಿ (25) ಮೃತ.

ಭಾನುವಾರ ಗೋಕಾಕ ನಗರದಿಂದ ಸವದತ್ತಿ ಕಡೆಗೆ ಕಾರಿನಲ್ಲಿ ವೇಗವಾಗಿ ಹೋಗುತ್ತಿರುವ ಸಂದರ್ಭದಲ್ಲಿ ಹಿರೇನಂದಿ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಎದುರುಗಡೆ ಬರುತ್ತಿರುವ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಈ ವೇಳೆ ಭಯದಿಂದ ಮೃತಪಟ್ಟಿದ್ದಾನೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಗೋಕಾಕ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.