ಮಹೇಶ್ 
ಜಿಲ್ಲೆ

ರಸ್ತೆ ಅಪಘಾತದಲ್ಲಿ ಸವಾರ ಮೃತ

ಹಲಗೂರು: ಸಮೀಪದ ಚಿಲ್ಲಾಪುರ ಗೇಟ್ ಬಳಿ ಸೋಮವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮದ್ದೂರು ತಾಲೂಕಿನ ಮಠದದೊಡ್ಡಿ ಗ್ರಾಮದ ನಿವಾಸಿ ಮಹೇಶ್ (43) ಮೃತರು. ಕೆಲಸದ ನಿಮಿತ್ತ ಹಲಗೂರಿಗೆ ಬಂದಿದ್ದ ಅವರು ಮರಳಿ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದ ವೇಳೆ ವರ್ತುಲ ರಸ್ತೆಗೆ ಅಡ್ಡಲಾಗಿ ಇಟ್ಟಿದ್ದ ಕಾಂಕ್ರೀಟ್ ದಿಂಡಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.