ಜಿಲ್ಲೆ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ

ಚಾಮರಾಜನಗರ: ಗ್ರಾಮೀಣ ಮತ್ತು ಸಂಪರ್ಕ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ರಸ್ತೆಗಳು ಅಭಿವೃದ್ಧಿಯ ಪ್ರತೀಕವಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ತಾಲೂಕಿನ ವೀರನಪುರ ಗ್ರಾಮದಿಂದ ನಂಜೇದೇನಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. ಚಾಮರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು, ಸಮುದಾಯ ಭವನ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಅಂದಾಜು 60 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

ಸರ್ಕಾರದ ವಿವಿಧ ಯೋಜನೆಗಳಡಿ ಅನುದಾನ ಮಂಜೂರು ಮಾಡಿಸಿ, ಸಿಸಿ ರಸ್ತೆ, ಚರಂಡಿಗಳನ್ನು ನಿರ್ಮಿಸಲಾಗುತ್ತಿದೆ. ಹಾಗಾಗಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚಿಸಿದರು. ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಗ್ರಾಪಂ ಅಧ್ಯಕ್ಷ ಶೇಖರಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಶಿವಸ್ವಾಮಿ, ಪರುಷೋತ್ತಮ್, ಬಿ.ಎಲ್.ಮಹದೇವಸ್ವಾಮಿ, ಸಿ.ಕೆ.ಮಂಜುನಾಥ್, ಸಾಗರ್ ಹಾಜರಿದ್ದರು.