ಸೋಮವಾರಪೇಟೆ ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್‌ಗೌಡ ಅವರನ್ನು ಸನ್ಮಾನಿಸಲಾಯಿತು. ಸತೀಶ್, ಡಿಸಿಲ್ವಾ, ಲೋಕೇಶ್, ಜಯೇಂದ್ರ ಇದ್ದರು. 
ಜಿಲ್ಲೆ

ರಸ್ತೆ ಕಾಮಗಾರಿಗೆ ಮೊದಲ ಆದ್ಯತೆ

ಸೋಮವಾರಪೇಟೆ : ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಶಾಸಕ ಡಾ.ಮಂತರ್‌ಗೌಡ ಹೇಳಿದರು.

ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ಸಾರ್ವಜನಿಕ ಅಹವಾಲು ಸ್ವೀಕರಿಸಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಕ್ರಮ ತೆಗದುಕೊಳ್ಳಲಾಗುವುದು. ಈ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿಯಿಂದ ಕೃಷಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ತಜ್ಞರೊಂದಿಗೆ ಚರ್ಚೆ ಮಾಡಬೇಕಿದೆ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶಾಸಕರ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿದರು. ಬ್ಲಾಕ್ ಅಧ್ಯಕ್ಷ ಬಿ.ಬಿ.ಸತೀಶ್, ಡಿಸಿಸಿ ಉಪಾದ್ಯಕ್ಷ ಕೆ.ಎಂ.ಲೋಕೇಶ್, ಕಾರ್ಯದರ್ಶಿ ಎಸ್.ಎಂ.ಡಿಸಿಲ್ವಾ, ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ಬಿ.ಇ.ಜಯೇಂದ್ರ, ನೇರುಗಳಲೆ ಗ್ರಾಪಂ ವ್ಯಾಪ್ತಿಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಕೆ.ಲೋಕೇಶ್, ಟಿ.ಕೆ.ಲೋಕಾನಂದ ಮತ್ತಿತರರು ಇದ್ದರು.