ಕೆ.ಎಂದೊಡ್ಡಿ: ಸಮೀಪದ ದೊಡ್ಡರಸಿನಕೆರೆ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಗ್ರಂಥಾಲಯ ನಿರ್ಮಾಣಕ್ಕೆ ಶಾಸಕ ಡಿ.ಸಿ ತಮ್ಮಣ್ಣ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದರು.
ಮದ್ದೂರು ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗೆ ಪೂರಕವಾಗಿ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ವಿಶೇಷ ಅನುದಾನ ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ ಹಂತ ಹಂತವಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು. ಕಾಂಕ್ರೀಟ್ ರಸ್ತೆಯಿಂದ ಜನರಿಗೆ ಓಡಾಡಲು ಪ್ರಯೋಜನವಾಗಲಿದೆ. ರಸ್ತೆ, ಒಳಚರಂಡಿ ಸೇರಿದಂತೆ ವಿವಿಧ ಕಾಮಗಾರಿಗಳು ಶೀಘ್ರವೇ ಪೂರ್ಣಗೊಳಿಸುವಂತೆ ಸಂಬಂಧಪಟ್ಟವರಿಗೆ ಶಾಸಕರು ಸೂಚಿಸಿದರು.
ಜಿಲ್ಲಾ ಸಹಕಾರ ಯೂನಿಯನ್ ಮಾಜಿ ನಿರ್ದೇಶಕ ಕುಳ್ಳ ಮಂಚೇಗೌಡ, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಮುಖಂಡರಾದ ಚಿಕ್ಕಹುಚ್ಚೇಗೌಡ, ಕೆ.ಟಿ.ಸುರೇಶ್, ಗುರುದೇವರಹಳ್ಳಿ ಅರವಿಂದ್, ಅಣ್ಣೂರು ವಿನು, ಪ್ರದೀಪ್, ಕಿರಣ್, ಆನಂದ್ ಇತರರು ಇದ್ದರು.