?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ರಸ್ತೆ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

ಕಿರಣ್ ಮಾದರಹಳ್ಳಿ

ಹನೂರು: ತಾಲೂಕಿನ ತೊಮಿಯಾರ್‌ಪಾಳ್ಯದಿಂದ ಶಾಗ್ಯ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹದಗೆಟ್ಟ ರಸ್ತೆಯನ್ನು ದುರಸ್ತಿ ಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ರಸ್ತೆಯು ಈ ಭಾಗದ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಕಳೆದ 2 ವರ್ಷದಿಂದ ಈ ರಸ್ತೆಯ ಬಹುತೇಕ ಕಡೆಗಳಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ಜಲ್ಲಿಗಳು ರಸ್ತೆಯ ಆಚೀಚೆ ಹರಡಿದೆ. ಗುಂಡಿ ಹಾಗೂ ಜಲ್ಲಿಕಲ್ಲುಗಳನ್ನು ತಪ್ಪಿಸಲು ಹೋಗಿ ಬೈಕ್ ಸವಾರರು ಆಯತಪ್ಪಿ ಬಿದ್ದು ಗಾಯಗೊಂಡಿರುವ ಘಟನೆಗಳು ಜರುಗುತ್ತವೆ. ಇತ್ತ ಮಳೆ ಬಂದ ವೇಳೆ ಗುಂಡಿಗಳಲ್ಲಿ ಹಲವು ದಿನಗಳವರೆಗೆ ನೀರು ನಿಲ್ಲುವಂತಾಗಿದೆ. ರಾತ್ರಿ ವೇಳೆಯಲ್ಲಂತೂ ಈ ರಸ್ತೆಯಲ್ಲಿ ಸಂಚರಿಸುವುದು ತ್ರಾಸದಾಯಕ ಕೆಲಸ. ಇದರಿಂದ ವಾಹನ ಸವಾರರು ಸಂಚರಿಸಲು ತುಂಬ ತೊಂದರೆಯನ್ನು ಅನುಭವಿಸುವಂತಾಗಿದೆ. ಹಾಗೆಯೇ ತೊಮಿಯಾರ್‌ಪಾಳ್ಯದಿಂದ ಹನೂರಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಅಣಗಳ್ಳಿ ದೊಡ್ಡಿ, ಭೈರನತ್ತ ಹೊರತುಪಡಿಸಿ ಇನ್ನುಳಿದ ರಸ್ತೆಯು ಸಹ ಇದೇ ರೀತಿಯ ಅವ್ಯವಸ್ಥೆಯಿಂದ ಕೂಡಿದೆ. ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಲ್ಲಿ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ನಿತ್ಯ ಸಂಚರಿಸಲು ಸಮಸ್ಯೆ ಎದುರಿಸುವಂತಾಗಿದೆ.

ಆದ್ದರಿಂದ ಸಂಬಂಧಪಟ್ಟವರು ಇನ್ನಾದರೂ ಇತ್ತ ಗಮನಹರಿಸಿ ರಸ್ತೆಯನ್ನು ಅಭಿವೃದ್ಧಿ ಪಡಿಸುವುದರ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.