ಜಿಲ್ಲೆ

ರಸ್ತೆ ಸುರಕ್ಷತಾ ಕ್ರಮಕ್ಕೆ ಒತ್ತಾಯ, ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ

ದೊಡ್ಡಬಳ್ಳಾಪುರ: ಕಂಟನಕುಂಟೆ ಬಳಿ ಸ್ಪೀಡ್ ಬ್ರೇಕರ್, ಸಿಗ್ನಲ್ ಅಳವಡಿಸುವಂತೆ ಆಗ್ರಹಿಸಿ ಶನಿವಾರ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸ್ಪೀಡ್ ಬ್ರೇಕರ್ ನಿರ್ಮಾಣಕ್ಕೆ ಹಲವು ಬಾರಿ ಮನವಿ ಮಾಡಿದ್ದೇವೆ. ಯಾರೂ ಕ್ರಮ ಕೈಗೊಂಡಿಲ್ಲ. ಕೆಆರ್‌ಡಿಸಿಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಿಂಗಳ ಅಂತರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇದಕ್ಕೆ ಯಾರು ಹೊಣೆ. ಕೂಡಲೇ ಸ್ಪೀಡ್ ಬ್ರೇಕರ್ ಅಳವಡಿಸವೇಕು. ಇಲ್ಲವಾದಲ್ಲಿ ಮತ್ತೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಗ್ರಾಮದ ಮುಖಂಡ ರಾಜಗೋಪಾಲ್ ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳಕ್ಕಾಗಮಿಸಿದ ಕೆಆರ್‌ಡಿಎಲ್ ಅಧಿಕಾರಿ ಪುಟ್ಟಪ್ಪ ಅವರನ್ನು ಪ್ರತಿಭಟನಾ ನಿರತ ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡರು. ನಿಮ್ಮ ನಿರ್ಲಕ್ಷ್ಯದಿಂದಲೇ ನಮ್ಮೂರಿನ ಹಲವರು ಪ್ರಾಣತೆರುತ್ತಿದ್ದಾರೆ. ಎಷ್ಟು ಬಾರಿ ಹೇಳಿದರೂ ಇಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಿಲ್ಲ. ಒಂದು ತಿಂಗಳ ಅಂತರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇದಕ್ಕೆ ಯಾರು ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.