ಹುಬ್ಬಳ್ಳಿ: ಜಿಲ್ಲಾಡಳಿತ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ (ಬೆಂಗಳೂರು), ಹುಬ್ಬಳ್ಳಿ ಧಾರವಾಡ ಮೋಟಾರು ಡ್ರೖೆವಿಂಗ್ ಸ್ಕೂಲ್ ಅಸೋಸಿಯೇಶನ್, ವಾಯುಮಾಲಿನ್ಯ ಪರೀಕ್ಷಣಾ ಕೇಂದ್ರ ಪ್ರವರ್ತಕರು ಹಾಗೂ ಹುಬ್ಬಳ್ಳಿ ಮೋಟಾರು ವಾಹನ ಡೀಲರ್ಸ್ ಇವುಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸ-2025ರ ಸಮಾರೋಪ ಸಮಾರಂಭ ಫೆ.15ರಂದು ಬೆಳಗ್ಗೆ 11ಗಂಟೆಗೆ ಗಬ್ಬೂರಿನ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ.
ಎಸಿಪಿ ವಿನೋದ ಮುಕ್ತೇದಾರ ಉದ್ಘಾಟಿಸುವರು. ಅಪರ ಸಾರಿಗೆ ಆಯುಕ್ತ ಕೆ.ಟಿ. ಹಾಲಸ್ವಾಮಿ ಹಾಗೂ ಜಂಟಿ ಸಾರಿಗೆ ಆಯುಕ್ತರಾದ ಎಂ.ಪಿ. ಓಂಕಾರೇಶ್ವರಿ ಪಾಲ್ಗೊಳ್ಳುವರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ದಾಮೋದರ ಅಧ್ಯಕ್ಷತೆ ವಹಿಸುವರು. ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಭಾಗವಹಿಸುವರು ಎಂದು ಹಿರಿಯ ಮೋಟಾರು ವಾಹನ ನಿರೀಕ್ಷಕ ಎಸ್.ಡಿ. ಬೆಲ್ಲದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.