ಮೂಡಿಗೆರೆ ತಾಲೂಕಿನ ಗೋಣಿಬೀಡು ರೋಟರಿಯಿಂದ ರಾಷ್ಟ್ರೀಯ ಹೆದ್ದಾರಿ ಬದಿ ಸೂಚನಾ ಫಲಕ ಅಳವಡಿಸಲಾಯಿತು. ಪಿಎಸ್‌ಐ ಹರ್ಷವರ್ಧನ್, ಪ್ರಸನ್ನ, ರತನ್, ಸ್ವಾತಿಶ್ರೀ, ಮುತ್ತಪ್ಪ ಇತರರಿದ್ದರು. 
ಜಿಲ್ಲೆ

ರಸ್ತೆ ಸುರಕ್ಷತಾ ಸೂಚನಾ ಫಲಕ ವೀಕ್ಷಿಸಿ

ಎಸ್.ಎನ್.ರವೀಂದ್ರ

ಮೂಡಿಗೆರೆ: ಗೋಣಿಬೀಡು ರೋಟರಿ ಸಂಸ್ಥೆಯಿಂದ ರಾಷ್ಟ್ರೀಯ ಹೆದ್ದಾರಿಯ ಅಲ್ಲಲ್ಲಿ ವಾಹನ ಸವಾರರ ಅನುಕೂಲಕ್ಕಾಗಿ ಸಂಚಾರ ನಿಯಮ ಸೂಚನೆ ಫಲಕಗಳನ್ನು ಗುರುವಾರ ಅಳವಡಿಸಲಾಯಿತು. ತುಮಕೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರದೇಶಗಳನ್ನು ಗುರುತಿಸಿ ಆ ಪ್ರದೇಶದಲ್ಲಿ ಫಲಕಗಳನ್ನು ಅಳವಡಿಸಲಾಯಿತು. ಜನ್ನಾಪುರದಲ್ಲಿ ಅಳವಡಿಸಿದ್ದ ಸೂಚನಾ ಫಲಕವನ್ನು ಗೋಣಿಬೀಡು ಪೊಲೀಸ್ ಠಾಣಾಧಿಕಾರಿ ಹರ್ಷವರ್ಧನ್ ಉದ್ಘಾಟಿಸಿದರು.

ಬಳಿಕ ಪಿಎಸ್‌ಐ ಹರ್ಷವರ್ಧನ್ ಮಾತನಾಡಿ, ವಾಹನ ಸವಾರರು ಜಾಗರೂಕತೆಯಿಂದ ಚಾಲನೆ ಮಾಡಿದರೆ ಅಪಘಾತಗಳನ್ನು ತಪ್ಪಿಸಬಹುದು. ಮಳೆಗಾಲದಲ್ಲಿ ಅಪಘಾತ ಹೆಚ್ಚಾಗಿ ಸಂಭವಿಸುವ ಸಾಧ್ಯತೆ ಇರುತ್ತದೆ. ತಿರುವು ಮತ್ತು ಅಪಾಯಕಾರಿ ಸ್ಥಳಗಳಲ್ಲಿ ವಾಹನಗಳನ್ನು ನಿಯಂತ್ರಿತ ವೇಗದಲ್ಲಿ ಚಲಾಯಿಸಬೇಕು. ಸೂಚನಾ ಫಲಕಗಳು ಅಪಘಾತಗಳನ್ನು ತಡೆಯುವಲ್ಲಿ ಸಹಕಾರಿಯಾಗಲಿವೆ. ಸಂಚಾರ ನಿಯಮ ಪಾಲಿಸಿದರೆ ಅಪಘಾತಗಳು ಸಂಭವಿಸಲು ಸಾಧ್ಯವಿಲ್ಲ. ವಾಹನ ಚಾಲಕರು ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.

ರೋಟರಿ ಸಂಸ್ಥೆ ಅಧ್ಯಕ್ಷ ಪ್ರಸನ್ನ, ಕಾರ್ಯದರ್ಶಿ ರತನ್, ಕಿರುಗುಂದ ಗ್ರಾಪಂ ಅಧ್ಯಕ್ಷೆ ಸ್ವಾತಿಶ್ರೀ, ರಾಜ್ಯ ಲ್ಯಾಂಪ್ಸ್ ಮಹಾಮಂಡಳ ಮಾಜಿ ಅಧ್ಯಕ್ಷ ಮುತ್ತಪ್ಪ, ವಿವಿಧ ಗ್ರಾಪಂ ಸದಸ್ಯರು, ರೋಟರಿ ಪದಾಧಿಕಾರಿಗಳು ಇದ್ದರು.