ಹೈಸೋಡ್ಲೂರು - ಬಿರುನಾಣಿ ರಸ್ತೆಯಲ್ಲಿ ಗಾಳಿ ಮಳೆಗೆ ಬಿದ್ದ ಮರವನ್ನು ಪೊನ್ನಂಪೇಟೆ ಅರಣ್ಯ ಇಲಾಖೆ ಸಿಬ್ಬಂದಿ ತೆರವು ಮಾಡಿದರು. 
ಜಿಲ್ಲೆ

ರಸ್ತೆಗೆ ಉರುಳಿದ ಮರ

ಅಭಿನಯ್ ಎಚ್.ಎಂ

ಗೋಣಿಕೊಪ್ಪ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಬಿರುಸುಗೊಂಡಿದ್ದು ಶುಕ್ರವಾರದಿಂದ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ತಾಲೂಕಿನ ಅಲ್ಲಲ್ಲಿ ಮರಗಳು ಧರೆಗೆ ಉರುಳಿ ಅನಾಹುತ ಸಂಭವಿಸಿದೆ.

ಹೈಸೋಡ್ಲೂರು - ಬಿರುನಾಣಿ ರಸ್ತೆಯಲ್ಲಿ ಗಾಳಿ ಮಳೆಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು, ಸಂಚಾರ ವ್ಯತ್ಯಯಗೊಂಡಿತ್ತು. ನಂತರ ಸ್ಥಳಕ್ಕಾಗಮಿಸಿದ ಪೊನ್ನಂಪೇಟೆ ಅರಣ್ಯ ಇಲಾಖೆ ಸಿಬ್ಬಂದಿ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.