ಜಿಲ್ಲೆ

ರಸ್ತೆಯುದ್ದಕ್ಕೂ ತಗ್ಗು-ಗುಂಡಿ, ಮುಳ್ಳು ಕಂಟಿ

ಶಿಗ್ಲಿ: ಸಂತೆಶಿಗ್ಲಿಯಿಂದ ಹೂವಿನಶಿಗ್ಲಿವರೆಗಿನ ರಸ್ತೆ ಹದಗೆಟ್ಟಿದ್ದು, ಜನ, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ರಸ್ತೆ ಇಕ್ಕೆಲ್ಲಗಳಲ್ಲಿ ಬೆಳೆದಿರುವ ಮುಳ್ಳು-ಕಂಟಿ ಬೆಳೆದಿದ್ದು ವಾಹನ ಸವಾರರ ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಗಿದೆ.

ಹೂವಿನಶಿಗ್ಲಿ ಗ್ರಾಮದ ವಿರಕ್ತಮಠದ ಜಾತ್ರಾ ಮಹೋತ್ಸವ ಜ. 14ರಂದು ನಡೆಯಲಿದ್ದು, ಜಾತ್ರೆಗೆ ಹೋಗಿ ಬರುವ ಭಕ್ತರು ಆತಂಕದಲ್ಲೇ ಸಂಚರಿಸುವಂತಾಗಿದೆ. ಲಕ್ಷೆ್ಮೕಶ್ವರ ತಾಲೂಕಿನ ಶಿಗ್ಲಿ ಗ್ರಾಮದಿಂದ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹೂವಿನಶಿಗ್ಲಿ ವರೆಗೆ ಸಂಚರಿಸುವ ರಸ್ತೆಗಳೆಲ್ಲ ತಗ್ಗು-ಗುಂಡಿಗಳು ತುಂಬಿಕೊಂಡಿದ್ದು ವಾಹನ ಸವಾರರು ಪರದಾಡುವಂತಾಗಿದೆ.

ಹೂವಿನಶಿಗ್ಲಿ ಗ್ರಾಮದ ಶ್ರೀ ವಿರಕ್ತಮಠದ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಸಾರ್ವಜನಿಕರಿಗೆ ಹಾಗೂ ವಾಹನಗಳಿಗೆ ಓಡಾಡಲು ಅನುಕೂಲವಾಗುವಂತೆ ತಗ್ಗು-ಗುಂಡಿಗಳನ್ನು ಮುಚ್ಚಿ, ಇಕ್ಕೆಲದಲ್ಲಿ ಬೆಳೆದಿರುವ ಮುಳ್ಳಿನ ಕಂಟಿಗಳನ್ನು ತೆರವುಗೊಳಿಸುವ ಕಾರ್ಯವಾಗಬೇಕು ಎಂದು ಲೋಕೋಪಯೋಗಿ ಇಲಾಣೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ. | ಎಸ್.ಪಿ. ಬಳಿಗಾರ ಜಿಪಂ ಸದಸ್ಯ, ಗದಗ
ಹೂವಿನಶಿಗ್ಲಿ ಗ್ರಾಮದ ವಿರಕ್ತಮಠದ ಜಾತ್ರಾಮಹೋತ್ಸವಕ್ಕೆ ಬರುವ ಸಾರ್ವಜನಿಕರಿಗೆ ಹಾಗೂ ವಾಹನಗಳಿಗೆ ರಸ್ತೆಯಲ್ಲಿ ಯಾವುದೆ ತೊಂದರೆಯಾಗದಂತೆ ಮುಳ್ಳಿನ ಕಂಟಿಗಳನ್ನು ಸ್ವಚ್ಛಗೊಳಿಸಿ ತಗ್ಗು-ಗುಂಡಿಗಳನ್ನು ಮುಚ್ಚಿಸಿ ಜನರಿಗೆ ಅನುಕೂಲ ಮಾಡಿಕೊಡಲಾಗುತ್ತದೆ.| ಗೋವಿಂದ ಎಚ್. ಭಜಂತ್ರಿಪಂಚಾಯತ್ ರಾಜ್ ಎಇಇ ಸವಣೂರು, ಹಾವೇರಿ ಜಿಲ್ಲೆ

EndFragment