ಜಿಲ್ಲೆ

ರಾಜ್ಯ ಉಪಾಧ್ಯಕ್ಷರಾಗಿ ಡಾ.ರೇಣುಕಾದೇವಿ ನೇಮಕ

ಚಾಮರಾಜನಗರ: ಕರ್ನಾಟಕ ರಾಜ್ಯ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಡಾ.ರೇಣುಕಾದೇವಿ ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿದ್ದ ಡಾ.ರೇಣುಕಾದೇವಿ ಅವರನ್ನು ಸಂಘದ ಬೈಲಾ ನಿಯಮ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿಯ ನಿರ್ಣಯದಂತೆ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಆದೇಶ ಹೊರಡಿಸಿದ್ದಾರೆ.