ತಿ.ನರಸೀಪುರ: ತಾಲೂಕಿನ ತಲಕಾಡು ಹೋಬಳಿಯ ಹೊಸ ಕುಕ್ಕೂರು -2ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರಾದ ಡಿ.ಭಾನುಪ್ರಿಯಾ ಹಾಗೂ ಸುಮಾ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಜಿಲ್ಲಾ ಮಟ್ಟದಲ್ಲಿ ನಡೆದ 14 ವರ್ಷದೊಳಗಿನ ಕ್ರೀಡಾಕೂಟದಲ್ಲಿ ಡಿ.ಭಾನುಪ್ರಿಯಾ ತಟ್ಟೆ ಎಸೆತ ಹಾಗೂ ಸುಮಾ 600 ಮೀ. ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ, ವಿಜೇತರಾಗಿ ರಾಜ್ಯಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾದರು.
ಇಬ್ಬರು ಸಾಧಕ ವಿದ್ಯಾರ್ಥಿನಿಯರನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಅಭಿನಾಯಕ ಅವರು ಇತ್ತೀಚೆಗೆ ಸನ್ಮಾನಿಸಿ, ಅಭಿನಂದಿಸಿದ್ದಾರೆ. ಶಾಲೆಯ ಶಿಕ್ಷಕರು, ಅಭಿವೃದ್ಧಿ ಸಮಿತಿ ಅಧ್ಯಕ್ಷ, ಸದಸ್ಯರು, ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.