ಜಿಲ್ಲೆ

ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಪಾರ್ವತಿ ಇತ್ತೀಚೆಗೆ ಚಾಮರಾಜನಗರದಲ್ಲಿ ಆಯೋಜಿಸಿದ್ದ ಪ್ರೌಢಶಾಲೆ ವಿಭಾಗದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ 400 ಮೀ. ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಕೋಲಾರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಯಲ್ಲೂ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದು ದೈಹಿಕ ಶಿಕ್ಷಣ ಶಿಕ್ಷಕ ಮಂಜು ತಿಳಿಸಿದ್ದಾರೆ. ಶಾಲೆ ಪ್ರಾಂಶುಪಾಲ ಮಹದೇವ ಪ್ರಸಾದ್ ಹಾಗೂ ಸಿಬ್ಬಂದಿ ವಿದ್ಯಾರ್ಥಿನಿ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆೆ.