ಜಿಲ್ಲೆ

ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಚಾಮರಾಜನಗರ: ಸಂತಪೌಲರ ವಿದ್ಯಾಸಂಸ್ಥೆಯ ವಿದ್ಯಾರ್ಥಿ 100 ಮೀ ಓಟ ಮತ್ತು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನಗರದ ಸಂತ ಪೌಲರ ವಿದ್ಯಾಸಂಸ್ಥೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ದುರ್ಗೇಶ್ ಕುಮಾರ್, 14 ವರ್ಷದೊಳಗಿನವರ ವಿಭಾಗದ 100 ಮೀ ಓಟದಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನಗಳಿಸಿ ವೈಯಕ್ತಿಕ ಚಾಂಪಿಯನ್‌ಷಿಪ್ ತನ್ನದಾಗಿಸಿಕೊಂಡಿದ್ದಾನೆ. ಮಕ್ಕಳ ದಿನಾಚರಣೆಯಂದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆಗೂ ಆಯ್ಕೆಯಾಗಿದ್ದಾರೆ.

ಜಿಲ್ಲೆ ಮತ್ತು ಶಾಲಾ ಆಡಳಿತ ಮಂಡಳಿಗೆ ಕೀರ್ತಿ ತಂದ ಕ್ರೀಡಾಪಟುವನ್ನು ಶಾಲಾ ಆಡಳಿತ ಮಂಡಳಿ ವ್ಯವಸ್ಥಾಪಕ ಸಿ.ಅಂತೋಣಪ್ಪ, ಮುಖ್ಯ ಶಿಕ್ಷಕ ಕೊಳಂದೈಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕಿ ರೀನಾ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ. ರಾಜ್ಯಮಟ್ಟದಲ್ಲೂ ಯಶಸ್ಸು ಸಾಧಿಸಲಿ ಎಂದು ಹಾರೈಸಿದ್ದಾರೆ.