ಮದ್ದೂರು: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ವಿ.ಕೆ. ಶಿವಾನಂದ ಹಾಗೂ ವಿ. ಶಿವಪ್ರಸಾದ್ ಅವರು ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ವಿ.ಕೆ. ಶಿವಾನಂದ ಅವರು ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ದೇಹದಾರ್ಢ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಶಿವಪ್ರಸಾದ್ ಅವರು ಟೆನಿಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಇಬ್ಬರೂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ಎ.ಸಿ. ಗೀತಾ ಅಭಿನಂದಿಸಿದ್ದಾರೆ.