ಜಿಲ್ಲೆ

ರಾಜ್ಯ ಮಟ್ಟದ ಚಿನ್ನಯಿ ಜ್ಞಾನಿ ಶಿಕ್ಷಕ ಪ್ರಶಸ್ತಿ ಪ್ರದಾನ

ಕುಶಾಲನಗರ: ಮೈಸೂರಿನ ಶರಣು ವಿಶ್ವ ವಚನ ಫೌಂಡೇಶನ್ ವತಿಯಿಂದ ನೀಡಲಾಗುವ 2022ನೇ ಸಾಲಿನ ರಾಜ್ಯಮಟ್ಟದ ಚಿನ್ಮಯಿಜ್ಞಾನಿ ಶಿಕ್ಷಕ ಪ್ರಶಸ್ತಿಯನ್ನು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಅವರಿಗೆ ಪ್ರದಾನ ಮಾಡಲಾಯಿತು.

ಮೈಸೂರಿನ ನಟರಾಜ ಸಭಾ ಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಮೈಸೂರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕ ಸಿ.ಆರ್. ನಾಗರಾಜಯ್ಯ ಪ್ರಶಸ್ತಿ ನೀಡಿ ಗೌರವಿಸಿದರು. ರಾಜ್ಯದ 30 ಶಿಕ್ಷಕರಿಗೆ ಈ ಸಂದರ್ಭದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಸೋಮವಾರಪೇಟೆ ಕ್ಷೇತ್ರಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಶರಣು ವಿಶ್ವವಚನ ಫೌಂಡೇಷನ್‌ನ ಡಾ.ವಚನ ಕುಮಾರಸ್ವಾಮಿ ಹಾಗೂ ರೂಪಾ ಕುಮಾರಸ್ವಾಮಿ ಇತರರು ಇದ್ದರು.
ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಅವರು ಕಳೆದ 28 ವರ್ಷಗಳಿಂದ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ವಿಜ್ಞಾನ ಸಂಘಟನೆ ಹಾಗೂ ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.