ರಾವಂದೂರು: ಪಿರಿಯಾಪಟ್ಟಣ ತಾಲೂಕು ರಾವಂದೂರಿನ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಊರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ.
ದೈಹಿಕ ಶಿಕ್ಷಣ ಶಿಕ್ಷಕ ವಿಜಯ್ ಅವರ ಮಾರ್ಗದರ್ಶದಲ್ಲಿ ವಿದ್ಯಾರ್ಥಿಗಳಾದ ಮನೋಜ್, ವಿನಯ್, ಯಶಸ್, ಯಶ್ವಂತ್, ಶರತ್ ಈ ಸಾಧನೆ ಮಾಡಿದ್ದಾರೆ. ಶ್ರೀ ಸಿದ್ದಣ್ಣ ಶೆಟ್ಟರ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜವರೇಗೌಡ, ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರವಿಪ್ರಸನ್ನ, ಅಕ್ಷರ ದಾಸೋಹ ಸಾಯಕ ನಿರ್ದೇಶಕ ಎಂ.ಸಿ ಪ್ರಶಾಂತ್, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಆರ್.ವಿ.ವಿಶ್ವನಾಥ್ , ಡಿ.ಟಿ. ಸ್ವಾಮಿ ಇತರರು ಅಭಿನಂದನೆ ಸಲ್ಲಿಸಿದ್ದಾರೆ.