ಹಾಸನ: ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಡೆಸಲಾದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮಾಸ್ಟರ್ಸ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿ ರಾಜ್ಯ ಮತ್ತು ರಾಷ್ಟ್ರೀಯ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.
ಮಾಸ್ಟರ್ಸ್ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿ ಪಿನಾಕ್ ಟೇಬಲ್ ಟೆನಿಸ್ ಆಟದಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ಹಾಸನ ಜಿಲ್ಲೆಗೆ ಮತ್ತು ಮಾಸ್ಟರ್ಸ್ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಥ್ರೋಬಾಲ್ ಮತ್ತು ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಕೆ.ಕೆ. ಹರ್ಷಿತಾ ಎಂಬ ವಿದ್ಯಾರ್ಥಿನಿ ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಸ್ಕೆಟ್ ಬಾಲ್ ಮತ್ತು ನೆಟ್ ಬಾಲ್ ಸ್ಪರ್ಧೆಯಲ್ಲಿ ಮಾಸ್ಟರ್ಸ್ ಕಾಲೇಜಿನ ಎರಡು ತಂಡಗಳು ವಿಜಯಶಾಲಿಯಾಗಿವೆ. ಬಾಸ್ಕೆಟ್ ಬಾಲ್ ತಂಡದ ಕ್ಯಾಪ್ಟನ್ ಆಗಿ ಸುಹಾಸ್, ಪ್ರಜ್ವಲ್, ಗೌತಮ್, ಕುಂದನ್ ಮತ್ತು ಭುವನ್ ನೆಟ್ ಬಾಲ್ ತಂಡದ ಕ್ಯಾಪ್ಟನ್ ಎಚ್. ವಿ.ರೋಹಿತ್, ಆರ್ಯನ್, ದರ್ಶನ್, ರಾಹುಲ್, ಗಗನ್, ಮಂಜುನಾಥ್ ಮತ್ತು ಎಸ್.ಸಿ.ರೋಹಿತ್ ಇವರುಗಳಲ್ಲಿ ಕೆಲವು ಸ್ಪರ್ಧಿಗಳು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಈಜು ಸ್ಪರ್ಧೆಯಲ್ಲಿ ರತನ್ ಎಂಬ ವಿದ್ಯಾರ್ಥಿ ಮೂರು ಚಿನ್ನದ ಪದಕಗಳೊಂದಿಗೆ ವಿಜೇತರಾಗಿದ್ದು, ಶ್ರೀನಿಧಿ, ರಿಷಿ ಮತ್ತು ಉಜ್ವಲ್ ಎಂಬುವವರು ಮೂರು ಕಂಚಿನ ಪದಕಗಳನ್ನು ಪಡೆದಿದ್ದಾರೆ. ಕರಾಟೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಪರೀಕ್ಷಿತ್ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿ ತಿರುಮಲ ಎಂಬುವವರು ತಲಾ ಒಂದೊಂದು ಚಿನ್ನದ ಪದಕ ಗಳಿಸಿ ರಾಜ್ಯ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.
ಚೆಸ್‌ನಲ್ಲಿ ಪ್ರಥಮ ಪಿಯುಸಿ ಕೌಸ್ತುಭ ಶರ್ಮ ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ಬೆಳ್ಳಿ ಪದಕ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫುಟ್‌ಬಾಲ್ ಪಂದ್ಯದಲ್ಲಿ ಯೂಸುಫ್ ಖಾನ್ ಮತ್ತು ನೆಟ್ ಬಾಲ್‌ನಲ್ಲಿ ಆರ್. ಮೊನಾಲ್ ಮತ್ತು ಶಮಿತಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತರಿಗೆ ಮಾಸ್ಟರ್ಸ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.