ಚಿಕ್ಕಮಗಳೂರಿನ ಪೊಲೀಸ್ ಭವನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ದೇವರಾಜ ಅರಸ್ ಜಯಂತಿಯನ್ನು ಕರ್ನಾಟಕ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಉದ್ಘಾಟಿಸಿದರು. ಕೆ.ಪಿ.ಅಂಶುಮAತ್, ಎಚ್.ಎಸ್.ಕೀರ್ತನಾ, ಎಚ್.ಪಿ.ಮಂಜೇಗೌಡ, ಸುದರ್ಶನ್, ಲಕ್ಷಿö್ಮÃಕಾಂತ್ ಮತ್ತಿತರರಿದ್ದರು. 
ಜಿಲ್ಲೆ

ರಾಜ್ಯಕ್ಕೆ ಅಪ್ರತಿಮ ಕೊಡುಗೆ ನೀಡಿದವರು ಡಿ.ದೇವರಾಜ ಅರಸು

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ಸುದೀರ್ಘ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ತಮ್ಮ ಕ್ರಾಂತಿಕಾರಿ ನಿಲುವುಗಳಿಂದ ರಾಜ್ಯಕ್ಕೆ ಅಪ್ರತಿಮ ಕೊಡುಗೆಯನ್ನು ನೀಡಿದವರು ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರು ಎಂದು ಕರ್ನಾಟಕ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ನಗರದ ಜಿಲ್ಲಾ ಪೊಲೀಸ್ ಸಮುದಾಯ ಭವನದಲ್ಲಿ ಪರಿವರ್ತನೆಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸುರವರ ೧೧೦ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ದೇವರಾಜ ಅರಸು ಅವರು ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗವನ್ನು ರಚಿಸಿ, ನಂತರದ ದಿನಗಳಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ಹಿಂದುಳಿದ ವರ್ಗದ ನಿಗಮ, ಮಂಡಳಿಯನ್ನು ಪ್ರಾರಂಭಿಸಿದರು. ಜೀತ ಪದ್ಧತಿಯನ್ನು ರದ್ದುಗೊಳಿಸಿ, ಬಡವರು ಹಾಗೂ ಶ್ರೀಮಂತರ ನಡುವೆ ಇರುವ ಅಂತರ ಹಾಗೂ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸಿದ್ದರು. ೧೯೭೩ರಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲು ಕಾರಣೀಭೂತರಾದವರು ಎಂದರು.

ರೈತರಿಗೆ ಅನುಕೂಲವಾಗುವಂತೆ ಕಾಳಿ ಯೋಜನೆಯನ್ನು ಜಾರಿಗೆ ತಂದರು. ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಹಿಂದುಳಿದ ವರ್ಗದವರು ಶೈಕ್ಷಣಿಕ ಕ್ಷೇತ್ರದಲ್ಲಿ ಮುಂದುವರಿಯಬೇಕೆAಬ ಆಶಯ ಹೊಂದಿದ್ದರು. ಈ ಕಾರಣದಿಂದಲೇ ಹಿಂದುಳಿದ ವರ್ಗದವರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯವನ್ನು ಒದಗಿಸಿ, ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ಟೆÊಫಂಡರಿ ಯೋಜನೆಯಲ್ಲಿ ಉದ್ಯೋಗ ಕಲ್ಪಿಸಿದ್ದರು. ಬಡವರ ಧ್ವನಿಯಾಗಿ ಭೂಸುಧಾರಣೆಯನ್ನು ಜಾರಿಗೆ ತಂದು ಉಳುವವನೇ ಹೊಲದೊಡೆಯ ಎನ್ನುವ ಕಾನೂನನ್ನು ಜಾರಿಗೆ ತಂದರು ಎಂದು ತಿಳಿಸಿದರು.

ಅಂದು ಶೃಂಗೇರಿ ಕ್ಷೇತ್ರದ ಶಾಸಕರಾಗಿದ್ದ ತಮ್ಮ ತಂದೆ ಬೇಗಾನೆ ರಾಮಯ್ಯ ಅವÀರು ಅರಸು ಅವರ ನಿಕಟವರ್ತಿಯಾಗಿ ಭೂಸುಧಾರಣಾ ಸಮಿತಿಯ ಸದಸ್ಯರೂ ಆಗಿದ್ದರು. ನಂತರ ಅವರು ಈ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಮಲೆನಾಡು ಭಾಗಕ್ಕೆ ಬೋರ್‌ವೆಲ್ ಅನ್ನು ಒದಗಿಸುವ ಮೂಲಕ ಬೋರ್‌ವೆಲ್ ರಾಮಯ್ಯ ಎಂದೇ ಖ್ಯಾತಿ ಪಡೆದಿದ್ದರು ಎಂದು ಹೇಳಿದರು.

ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮAತ್ ಮಾತನಾಡಿ, ಇಂದು ದೇಶ ಕಂಡ ಅಪ್ರತಿಮ ನಾಯಕ ದೇವರಾಜ ಅರಸು ಅವರ ಹಾಗೂ ಆಧುನಿಕ ತಂತ್ರಜ್ಞಾನದ ಹರಿಕಾರರಾಗಿದ್ದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರ ಹುಟ್ಟುಹಬ್ಬವೂ ಆಗಿದೆ. ತಮ್ಮ ದಕ್ಷ ಆಡಳಿತದ ಮೂಲಕ ಹಲವಾರು ದೂರದೃಷ್ಟಿಯ ಕಾರ್ಯಕ್ರಮಗಳನ್ನು ನೀಡಿದ ದೇವರಾಜ ಅರಸು, ಭೂ ಒಡೆತನದ ಹಕ್ಕು ನೀಡಿರುವುದು ಮಾತ್ರವಲ್ಲ, ಮಾಜಿ ಪ್ರಧಾನಿ ದಿ.ಇಂದಿರಾಗಾAಧಿಯವರ ೨೦ ಅಂಶಗಳ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದವರು. ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಅನುಕೂಲವಾಗುವಂತೆ ಹಾಸ್ಟೆಲ್ ಸೌಲಭ್ಯವಲ್ಲದೆ, ವಿದ್ಯಾರ್ಥಿ ವೇತನವನ್ನು ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದು ಬಡವರಿಗೆ ಬದುಕು ಕಟ್ಟಿಕೊಟ್ಟವರು ಎಂದು ತಿಳಿಸಿದರು.

ದಿ.ಡಿ.ದೇವರಾಜ ಅರಸು ಅವರ ತತ್ವ ಮತ್ತು ಸಾಧನೆಗಳ ಬಗ್ಗೆ ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಅರ್ಥಶಾಸ್ತç-ಸ್ನಾತಕೋತ್ತರ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಲಕ್ಷಿö್ಮÃಕಾಂತ್ ಉಪನ್ಯಾಸ ನೀಡಿ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಒಬ್ಬ ಶ್ರೇಷ್ಠ ಮತ್ತು ಧೀಮಂತ ನಾಯಕ, ದಾರ್ಶನಿಕ. ೧೯೬೯ ರಿಂದ ೧೯೭೯ರವರೆಗಿನ ಕಾಲಘಟ್ಟವನ್ನು ಅರಸು ಯುಗವೆಂದು ಕರೆಯಲಾಗುತ್ತದೆ. ೧೯೬೯-೭೦ರ ಅವಧಿಯಲ್ಲಿ ರಾಜ್ಯದ ಅವಿಸ್ಮರಣೀಯ ಬೆಳವಣಿಗೆಗೆ ಉತ್ತಮ ಅಡಿಪಾಯವನ್ನು ಹಾಕಿಕೊಟ್ಟವರು. ಅವರು ವಿಶೇಷವಾಗಿ ದೀನ ದಲಿತರು, ಬಡವರು, ಹಿಂದುಳಿದವರ ಬಗ್ಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದವರು. ಶೋಷಿತ ಜನರ ಕಷ್ಟ ಕಾರ್ಪಣ್ಯವನ್ನು ಅರಿತುಕೊಂಡಿದ್ದರು. ಬಡತನ ನಿರ್ಮೂಲನೆಗೆ ಶ್ರಮಿಸಿದ ಮಹಾನ್ ನಾಯಕ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಪೌತಿ ಖಾತೆಯ ವಾರಸುದಾರರಿಗೆ ಪಹಣಿಗಳನ್ನು ವಿತರಿಸಲಾಯಿತು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅರಸು ಸಂಘದ ಅಧ್ಯಕ್ಷ ಕೆ.ಜೆ.ಮಂಜುನಾಥ ರಾಜ್ ಅರಸ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ನಾಗರಾಜ ಅರಸ್, ನಗರಸಭೆ ಸದಸ್ಯರಾದ ಮಧುಕುಮಾರ್ ರಾಜ್ ಅರಸ್, ಪರಮೇಶ್ ಅರಸ್, ಅಲೆಮಾರಿ ಸಂಘದ ಅಧ್ಯಕ್ಷ ಚಂದ್ರಶೇಖರ್, ಉಪವಿಭಾಗಾಧಿಕಾರಿ ಸುದರ್ಶನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಮುಖಂಡರಾದ ಕೆ.ಟಿ.ರಾಧಾಕೃಷ್ಣ, ಎಚ್.ಪಿ.ಮಂಜೇಗೌಡ, ಜಯರಾಜ ಅರಸ್ ಮತ್ತಿತರರು ಉಪಸ್ಥಿತರಿದ್ದರು.ಇದಕ್ಕೂ ತಾಲೂಕು ಕಚೇರಿ ಆವರಣದಿಂದ ಆರಂಭಗೊAಡ ಮೆರವಣಿಗೆಗೆ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಚಾಲನೆ ನೀಡಿದರು.