filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.6381743, 0.54685724);sceneMode: 5767168;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 50; 
ಜಿಲ್ಲೆ

ರಾಜ್ಯದ ಖಜಾನೆ ನಿರಂತರ ಲೂಟಿ

ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಖಜಾನೆ ನಿರಂತರ ಲೂಟಿಯಾಗುತ್ತಿದೆ ಎಂದು ಮಾಜಿ ಡಿಸಿಎಂ ಗೋವಿಂದ ಎಂ. ಕಾರಜೋಳ ಆರೋಪಿಸಿದರು.
ವಿಧಾನಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದ ಸಂತ ಜೋಸೆಫರ ಕಾನ್ವೆಂಟ್‌ನಲ್ಲಿ ಶುಕ್ರವಾರ ಮತಯಾಚಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯ ಸರ್ಕಾರದಿಂದ ಖಜಾನೆ ಲೂಟಿಯಾಗುತ್ತಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದ ಹಗರಣ ಭ್ರಷ್ಟಾಚಾರವಲ್ಲ, ಹಗಲು ದರೋಡೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಮಾರ್ಚ್‌ನಲ್ಲಿ 180 ಕೋಟಿ ರೂ. ಗಳನ್ನು ಬೇರೆ, ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿದ್ದು, ಚುನಾವಣೆಗೆಂದು ಈ ಹಣ ತೆಲಂಗಾಣಕ್ಕೆ ಹೋಗಿದೆ. ಹಗಣರ ಬಯಲಿಗೆ ಬಂದರೂ ಸಿಎಂ ಸಿದ್ದರಾಮಯ್ಯ ಯಾವುದೇ ಹೇಳಿಕೆ ನೀಡಿಲ್ಲ. ಹಣಕಾಸು ಇಲಾಖೆ ಅವರದ್ದೇ ಆಗಿದೆ. ಈ ಹೊತ್ತಿಗೆ ನಾಗೇಂದ್ರ ಅವರ ರಾಜೀನಾಮೆ ಪಡೆದು, ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕಿತ್ತು. ಆದರೆ, ಸಚಿವರನ್ನು ರಕ್ಷಿಸಲು ಸಿಎಂ, ಸಂಪುಟದ ಸದಸ್ಯರು ಭಂಡತನದಿಂದ ವರ್ತಿಸುತ್ತಿದ್ದಾರೆ ಎಂದು ದೂರಿದರು.
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿರುದ್ಧ ಆರೋಪ ಕೇಳಿಬಂದಿದ್ದಾಗ ಈಶ್ವರಪ್ಪರ ಬಂಧನಕ್ಕೆ ಒತ್ತಾಯಿಸಿದ್ದ ಸಿದ್ದರಾಮಯ್ಯ ಈಗ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ ಎಂದರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ನಿಸ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದ ಅವರು, ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ವೈ.ಎನ್.ನಾರಾಯಣಸ್ವಾಮಿ ಅವರನ್ನು ಪ್ರಥಮ ಪ್ರಾಶಸ್ತ್ಯದೊಂದಿಗೆ ಗೆಲ್ಲಿಸುವಂತೆ ಮನವಿ ಮಾಡಿದರು.
ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಶಂಭು ಮಹಾರಾಜ್, ನಗರಸಭಾ ಸದಸ್ಯರಾದ ಹರೀಶ್, ಕೃಷ್ಣಮೂರ್ತಿ, ನವೀನ ಚಾಲುಕ್ಯ, ಪರಶುರಾಮ್, ಶೀಲಾ, ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್, ಶಂಭು, ಮಂಜುಳಮ್ಮ, ಶಾಂತಮ್ಮ, ಕಾಂಚನಾ, ಅರುಣ್, ರವಿಕುಮಾರ್, ಶೈಲಜಾರೆಡ್ಡಿ, ಬಸಮ್ಮ ಮತ್ತಿತರರು ಇದ್ದರು.