ಚಿಕ್ಕಮಗಳೂರಿನ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡಾಂಬೆ ಫೋಟೋಗೆ ಸಚಿವ ಕೆ.ಜೆ.ಜಾರ್ಜ್, ಶಾಸಕ ಎಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಸಿ.ಟಿ.ರವಿ ಅವರು ಪುಷ್ಪಾರ್ಚನೆ ಮಾಡಿದರು. 
ಜಿಲ್ಲೆ

ರಾಜ್ಯದ ಸಂಪನ್ಮೂಲದ ತವರು ಚಿಕ್ಕಮಗಳೂರು

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ರಾಜ್ಯದ ಜಲಸಂಪನ್ಮೂಲದ ತವರು ಚಿಕ್ಕಮಗಳೂರು. ಏಳು ಪ್ರಮುಖ ನದಿಗಳಾದ ತುಂಗಾ, ಭದ್ರಾ, ನೇತ್ರಾವತಿ, ಹೇಮಾವತಿ, ಯುಗಚಿ, ವೇದಾ, ಆವತಿ ನದಿಗಳು ಹುಟ್ಟುವುದು ನಮ್ಮ ಜಿಲ್ಲೆಯ ಪಶ್ಚಿಮ ಘಟ್ಟಗಳಲ್ಲಿ. ಈ ನದಿಗಳು ನಮ್ಮ ರಾಜ್ಯದ ಹತ್ತಾರು ಜಿಲ್ಲೆಗಳಿಗೆ ನೀರುಣಿಸಿ ನೆರೆಯ ಆಂದ್ರ, ತಮಿಳುನಾಡುಗಳಿಗೂ ಜಲಧಾರೆ ಹರಿಸುತ್ತಿವೆ. ಆದ್ದರಿಂದ ಇಲ್ಲಿನ ಪಶ್ಚಿಮ ಘಟ್ಟಗಳ ಪಕೃತಿ ಸಮತೋಲನವನ್ನು ಕಾಪಾಡಿಕೊಂಡು ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವ ಅನನ್ಯ ಹೊಣೆಗಾರಿಕೆಯನ್ನು ಪ್ರತಿಯೊಬ್ಬ ಕನ್ನಡಿಗನೂ ವಹಿಸಿಕೊಳ್ಳಬೇಕು ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟç ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಚಿಕ್ಕಮಗಳೂರಿನ ಸಂಸ್ಕೃತಿ, ಪರಂಪರೆ, ಇತಿಹಾಸಗಳಲ್ಲಿ ರಾಮಾಯಣ, ಮಹಾಭಾರತ ಸೇರಿದಂತೆ ಹಲವು ಪುರಾಣ ಪುಣ್ಯ ಕಥೆಗಳು ಸೇರಿಕೊಂಡಿವೆ ಎಂದರು.

ನಮ್ಮ ಮಲೆನಾಡಿನ ಅಂಟಿಕೆ ಪಿಂಟಿಕೆ ಸಂಪ್ರದಾಯ ದೇವಸ್ಥಾನದಲ್ಲಿ ಹಚ್ಚಿದ ದೀಪದ ಬೆಳಕನ್ನು ಮನೆಮನೆಗೆ ಮುಟ್ಟಿಸಿ ಹಾಡುಗಳ ಮೂಲಕ ಶುಭ ಹಾರೈಸುವ ಪದ್ಧತಿಯೇ ಅತ್ಯಂತ ವಿಶಿಷ್ಟಪೂರ್ಣವಾಗಿದೆ. ದೀಪಾವಳಿ ಸಂದರ್ಭದಲ್ಲಿ ವಿಶೇಷ ಪೂಜೆಗೆ ಪಾತ್ರಗಳಾಗುವ ನಮ್ಮ ದೇವಿರಮ್ಮ ದೇವಿ ನಮ್ಮ ಹೆಮ್ಮೆ ಎಂದು ಹೇಳಿದರು.

ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರಿಗೆ ಹಾಗೂ ಲಿಂಗತಾರತಮ್ಯವನ್ನು ಸರಿದೂಗಿಸಲು ಪಂಚಗ್ಯಾರAಟಿ ಯೋಜನೆಗಳನ್ನು ಯಾವುದೇ ಅಡ್ಡಿ, ಅತಂಕವಿಲ್ಲದೆ ವಿರೋಧಿಗಳ ನಿರಂತರ ವಿರೋಧದ ನಡುವೆಯೂ ಅತ್ಯಂತ ಸಮರ್ಪಕವಾಗಿ ಅನುಷ್ಠಾನಗೊಳಿಸಿರುವುದು ನಮ್ಮ ಸರ್ಕಾರದ ಬದ್ಧತೆಯನ್ನು ಸಾರುತ್ತದೆ ಎಂದರು.

ಪAಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದರೂ ಸಹ ಅಭಿವೃದ್ಧಿ ವಿಷಯದಲ್ಲಿ ನಮ್ಮ ಸರ್ಕಾರವು ಯಾವುದೇ ರಾಜಿ ಮಾಡಿಕೊಳ್ಳದೆ ರಾಜ್ಯದ ಸವಾಂಗೀಣ ಅಭಿವೃದ್ಧಿಗೆ ಒತ್ತು ಕೊಟ್ಟಿದೆ. ಅದರಲ್ಲಿ ವಿಶೇಷವಾಗಿ ನಮ್ಮ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆಯ ೫ ವಿಧಾನಸಭಾ ಕ್ಷೇತ್ರ ಶಾಸಕರುಗಳಿಗೆ ತಲಾ ೫೦ ಕೋಟಿ ರೂ. ನಂತೆ ೨೫೦ ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ. ಚಿಕ್ಕಮಗಳೂರು ಜಿಲ್ಲೆಯ ಲೋಕೋಪಯೋಗಿ ಇಲಾಖೆಯಲ್ಲಿ ೮೯ ವಿವಿಧ ಕಾಮಗಾರಿಗಳಿಗೆ ಒಟ್ಟು ೧೫೦ ಕೋಟಿ ರೂ. ಹಣ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.

ಚಿಕ್ಕಮಗಳೂರು ನಗರದಲ್ಲಿ ನೂತನವಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಶಂಕು ಸ್ಥಾಪನೆ, ಕಡೂರಿನಲ್ಲಿ ೧೬ ಕೋಟಿ ರೂ. ವೆಚ್ಚದಲ್ಲಿ ಪ್ರಜಾ ಸೌಧ ಕಟ್ಟಡ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಚಿಕ್ಕಮಗಳೂರು ಜಿಲ್ಲೆಯ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ರೂ.೭ ಕೋಟಿ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ವಿವರಿಸಿದರು.

ಕಂದಾಯ ಇಲಾಖೆಯ ಪೌತಿ ಖಾತೆ ಅಂದೋಲನದಲ್ಲಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು ಮೃತರ ಹೆಸರಿನಲ್ಲಿರುವ ೨೨ ಸಾವಿರ ಕಂದಾಯ ಖಾತೆಗಳನ್ನು ಅವರ ಕುಟುಂಬದವರಿಗೆ ವರ್ಗಾಯಿಸಿ ಕೊಟ್ಟಿರುವುದು ಶ್ಲಾಘನೀಯ. ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳನ್ನು ಡಿಜಿಟಲೀಕರಣ ಪ್ರಕ್ರಿಯೆಯೂ ಜಿಲ್ಲೆಯ ೯ ತಾಲೂಕುಗಳಲ್ಲಿ ಒಟ್ಟು ೭ ತಾಲೂಕುಗಳು ಮುಗಿದಿದ್ದು, ಇನ್ನುಳಿದ ೨ ತಾಲೂಕುಗಳ ಡಿಜಿಟಲೀಕರಣ ಶೀಘ್ರವೇ ಮುಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪೂರಕವಾಗಿ ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಜಿಲ್ಲೆಯ ಪ್ರವಾಸಿ ತಾಣಗಳ ಸಮಗ್ರ ಮಾಹಿತಿಯುಳ್ಳ ವೆಬ್‌ಸೈಟ್ ಅನ್ನು ನಿರ್ಮಿಸಿರುವುದು ಅಭಿನಂದನಾರ್ಹ. ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ಜಿಲ್ಲೆಯಲ್ಲಿ ಶೇ.೯೮.೫೪ ರಷ್ಟು ಸಾಧನೆ ಮಾಡಿ ಒಟ್ಟು ೧೭೪ ಕೋಟಿ ರೂ. ವೆಚ್ಚ ಮಾಡಲಾಗಿದೆ. ಜಲ ಜೀವನ್ ಮಿಷನ್ ಯೋಜನೆ ಅಡಿ ಒಟ್ಟು ೯೭೦.೯೧ ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈಗಾಗಲೇ ರೂ.೪೫೧.೪೬ ಕೋಟಿ ರೂ. ವೆಚ್ಚವಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಸಮರ್ಪಕ ವಿದ್ಯುತ್ ಸರಬರಾಜು ಮಾಡುವ ದೂರದೃಷ್ಟಿಯ ಹಿನ್ನೆಲೆಯಲ್ಲಿ ಸುಮಾರು ೧೫೦ ಕೋಟಿ ರೂ. ವೆಚ್ಚದಲ್ಲಿ ೨೩ ವಿದ್ಯುತ್ ಉಪ ಕೇಂದ್ರಗಳಲ್ಲಿ ಹೆಚ್ಚುವರಿ ಪರಿವರ್ತಕ ಅಳವಡಿಕೆ ಹಾಗೂ ಸಾಮರ್ಥ್ಯವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಉz್ದೆÃಶಿಸಲಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಚ್.ಡಿ.ತಮ್ಮಯ್ಯ ವಹಿಸಿದದದರು. ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ವಿಧಾನ ಪರಿಷಯ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಸಿ.ಟಿ.ರವಿ, ಡಿಸಿ ಮೀನಾ ನಾಗರಾಜ್, ಎಸ್‌ಪಿ ವಿಕ್ರಮ ಅಮಟೆ, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಭದ್ರಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮAತ್, ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಮತ್ತಿತರರಿದ್ದರು.

ಗಮನಸೆಳೆದ ಭದ್ರಬಾಲ್ಯ ಸ್ತಬ್ಧ ಚಿತ್ರ

ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಇಲಾಖೆಗಳು ಸ್ಥಬ್ಧ ಚಿತ್ರಗಳನ್ನು ನಿರ್ಮಿಸಿ ಮೆರವಣೆಗೆಯಲ್ಲಿ ಭಾಗವಹಿಸಿದ್ದು, ಇದರಲ್ಲಿ ಜಿಲ್ಲಾ ಪಂಚಾಯಿತಿಯ ಭದ್ರ ಬಾಲ್ಯ ಯೋಜನೆ ಸ್ಥಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದಿಂದ ನಿರ್ಮಿಸಿದ ಪಂಚ ಗ್ಯಾರಂಟಿ ಯೋಜನೆಗಳ ಸ್ಥಬ್ಧ ಚಿತ್ತಕ್ಕೆ ದ್ವಿತೀಯ ಬಹುಮಾನ ಹಾಗೂ ಜಿಪಂ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯಿಂದ ನಿರ್ಮಿಸಿದ್ದ ಜಲ ಜೀವನ್ ಮಿಷನ್ ಯೋಜನೆಗೆ ತೃತೀಯ ಬಹುಮಾನ ಲಭಿಸಿತು.

ಶಾಲಾ ಮಟ್ಟದಲ್ಲಿ ಭಾಗವಹಿಸಿದ ಸ್ಥಬ್ಧ ಚಿತ್ರಗಳಲ್ಲಿ ಸಾಯಿ ಏಂಜಲ್ಸ್ ಶಾಲೆಯ ಅನುಭವ ಮಂಟಪ ಸ್ಥಬ್ಧ ಚಿತ್ರಕ್ಕೆ ಪ್ರಥಮ, ಕೆಪಿಎಸ್ ಶಾಲೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಬ್ಧ ಚಿತ್ರಕ್ಕೆ ದ್ವಿತೀಯ, ಜೆವಿಎಸ್ ಶಾಲೆಯ ಕೆಂಪೇಗೌಡರ ಸ್ಥಬ್ಧ ಚಿತ್ರಕ್ಕೆ ತೃತೀಯ ಬಹುಮಾನ ಲಭಿಸಿತು.

ಪೆರಡ್‌ನಲ್ಲಿ ಭಾಗವಹಿಸಿದ ತುಕ್ಕಡಿಯಲ್ಲಿ ಮೊದಲ ಬಹುಮಾನ ಗೃಹ ರಕ್ಷಕದಳಕ್ಕೆ ,ದ್ವಿತೀಯ ಬಹುಮಾನ ಎನ್‌ಸಿಸಿಯಲ್ಲಿ ಡಿಎಸಿಜಿ ಪಾಲಿಟೆಕ್ನಿಕ್, ಸೇವಾದಳ ಜಿಜಿಜೆಸಿ ಬಸವನಹಳ್ಳಿ ಶಾಲೆ, ತೃತೀಯ ಬಹುಮಾನ ಸ್ಕೌಟ್ ಆಂಡ್‌ಗೈಡ್ಸ್ ಉಪ್ಪಳ್ಳಿ ಜ್ಞಾನ ರಶ್ಮಿ ಶಾಲೆಗೆ ಅಭಿಸಿದೆ. ಶಾಲಾ ತಂಡದಲ್ಲಿ ಮೊದಲ ಪ್ರಥಮ ಬಹುಮಾನ ಟೈಮ್ಸ್ ಇಂಟರ್‌ನ್ಯಾಶನಲ್ ಶಾಲೆಗೆ ಲಭಿಸಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಕಾಫಿ ಸಂಶೋಧನ ಕೇಂದ್ರವು ಕಾಫಿಯ ಬಗ್ಗೆ ಸಂಶೋಧನೆ ನಡೆಸಿ ಹೊಸತಳಿ ಅಭಿವೃದ್ಧಿ, ಹೊಸ ಮಾರುಕಟ್ಟೆ ಸಾಧ್ಯತೆ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲಿ ಕಾಫಿ ಬೆಳಗಾರರಿಗೆ ಅನುಕೂಲವನ್ನು ಮಾಡಿ ಕೊಟ್ಟಿದೆ. ಈ ಸಂಶೋಧನ ಕೇಂದ್ರವು ಶತಮಾನೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಶುಭವನ್ನು ಹಾರೈಸುತ್ತೇನೆ.

ಕೆ.ಜೆ.ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ