ಜಿಲ್ಲೆ

ರಾಜ್ಯದಲ್ಲಿ ಗುಜರಾತ್ ಮಾದರಿ ವರ್ಕೌಟ್ ಆಗೊಲ್ಲ

ಹುಬ್ಬಳ್ಳಿ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಗುಜರಾತ್ ಮಾದರಿ ವರ್ಕೌಟ್ ಆಗೊಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ನಾವು ಯಾರ ಜತೆನೂ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕು ಎಂಬುದು ನಮ್ಮ ಗುರಿಯಾಗಿದೆ ಎಂದರು.

ಪಂಚರತ್ನ ಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಪಂಚರತ್ನ ಯಾತ್ರೆಗೆ ಸಮಯ ನಿಗದಿಯಾಗಿರುವುದರಿಂದ ಬೆಳಗಾವಿ ಅಧಿವೇಶನದಲ್ಲಿ ನಾನು ಭಾಗವಹಿಸುವುದಿಲ್ಲ. ನನ್ನ ಅನುಪಸ್ಥಿತಿಯಲ್ಲಿ ಬಂಡೆಪ್ಪ ಕಾಶೆಂಪುರ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾರೆ ಎಂದು ತಿಳಿಸಿದರು.

ಬೆಳಗಾವಿ ಗಡಿ ವಿಷಯದಲ್ಲಿ ಎರಡೂ ರಾಜ್ಯಗಳ ಬಿಜೆಪಿ ನಾಯಕರು ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಮಾತನಾಡಲು ಅಭಿವೃದ್ಧಿ ವಿಷಯಗಳಿಲ್ಲ. ಗಡಿ ವಿವಾದ ಮುಗಿದು ಹೋದ ಅಧ್ಯಾಯ. ರಾಜ್ಯ ಸರ್ಕಾರ ಕೇವಲ ಘೊಷಣೆಗೆ ಸೀಮಿತವಾಗಿದೆ ಎಂದು ಟೀಕಿಸಿದರು.