ಜಿಲ್ಲೆ

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ

ಕುಶಾಲನಗರ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ, ಶಿರಂಗಾಲ ಗ್ರಾಮದ ಜೆಡಿಎಸ್ ಪ್ರಮುಖ ಧರ್ಮಪ್ಪ ನೇತೃತ್ವದಲ್ಲಿ ಗುರುವಾರ ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ವಿಎಸ್‌ಎಸ್‌ಎನ್ ಅಧ್ಯಕ್ಷರು ಸೇರಿದಂತೆ ನೂರಾರು ಪ್ರಮುಖರು ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್ ಸೇರ್ಪಡೆಗೊಂಡರು.


ತಮ್ಮ ನಿವಾಸದಲ್ಲಿ ಪಕ್ಷ ಸೇರ್ಪಡೆಯಾದ ಪ್ರಮುಖರನ್ನು ಸ್ವಾಗತಿಸಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್ ಸರ್ಕಾರ ಈ ಹಿಂದೆ ಹಲವಾರು ಜನಪರ ಹಾಗೂ ರೈತರ ಪರ ಯೋಜನೆಗಳನ್ನು ಜಾರಿಗೆ ತಂದಿರುವುದು ಇನ್ನೂ ಕೂಡ ರಾಜ್ಯದ ಜನತೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದೆ. ಈಗಾಗಲೇ ಮಡಿಕೇರಿ ವಿಧಾನಸಭಾ ಕ್ಷೇತ್ರದಾದ್ಯಂತ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗಿದೆ. ಮುಂದೆ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದೆ.


ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಹಾಗೂ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯಿಂದ ಜನ ಬೇಸತ್ತು ಇಂದು ತೃತೀಯ ಶಕ್ತಿಯಾಗಿರುವ ಜೆಡಿಎಸ್ ಅನ್ನು ಬೆಂಬಲಿಸಿ ದೀನ ದಲಿತರು, ರೈತರು ಆಶೀರ್ವಾದ ಮಾಡುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದೆ. ಮುಂದೆ ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ರಾಜ್ಯದ ಹಿತ ಶತಸ್ಸಿದ್ಧ ಎಂದರು.


ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಜೆ.ಗೀತಾ, ವಿಎಸ್‌ಎಸ್‌ಎನ್ ಅಧ್ಯಕ್ಷ ಎನ್.ಎನ್.ಧರ್ಮಪ್ಪ, ಶ್ರೀ ಮಂಟಿಗಮ್ಮ ದೇವಾಲಯ ಸಮಿತಿಯ ಅಧ್ಯಕ್ಷ ರುದ್ರಪ್ಪ, ಅರ್ಥಶಾಸತ್ರ ಉಪನ್ಯಾಸಕ ಎಂ.ಕೆ.ವಿಜಯಕುಮಾರ್, ಪ್ರಮುಖರಾದ ರಮೇಶ್, ಪ್ರಕಾಶ್, ಎನ್.ಸಿ.ಧರ್ಮಪ್ಪ ಗುರುಪಾದಪ್ಪ, ಜವರೇಗೌಡ, ಶೇಖರ್.ಎನ್.ಎಸ್, ಮನೋಹರ್.ಎಸ್.ಕೆ, ಕೃಷ್ಣಮೂರ್ತಿ, ರಾಜು.ಸಿ.ಎನ್, ಕುಮಾರ್, ರಾಮಪ್ಪ, ಕೃಷ್ಣಮೂರ್ತಿ ಸೇರಿದಂತೆ ನೂರಾರು ಮಂದಿ ಜೆಡಿಎಸ್ ಸೇರ್ಪಡೆಯಾದರು.