ಹಾಸನ: ರಾಜ್ಯದಲ್ಲಿ ಪ್ರತಿನಿತ್ಯ ಹಿಂದೂಗಳ ಮೇಲೆ ದೌರ್ಜನ್ಯ, ಕೊಲೆ ಪ್ರಕರಣಗಳು ಮುಸ್ಲಿಂ ಸಮುದಾಯದಿಂದ ನಡೆಯುತ್ತಿದ್ದರು ಕೂಡ ಸರ್ಕಾರ ಇದನ್ನು ತಡೆಗಟ್ಟುವಲ್ಲಿ ವಿಫಲವಾಗಿದೆ. ಅಲ್ಲದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿರುವುದನ್ನ ಖಂಡಿಸಿ ಶ್ರೀರಾಮ ಸೇನಾ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಮುಸ್ಲಿಂ ಯುವಕರ ಅಟ್ಟಹಾಸ ಹೆಚ್ಚಾಗಿದ್ದು, ಕಾನೂನು ಸುವ್ಯವಸ್ಥೆ, ಪೊಲೀಸ್ ಮತ್ತು ಸಂವಿಧಾನಕ್ಕೆ ಗೌರವ ಕೊಡದೆ ತಾಲಿಬಾನ್ ಮಾದರಿಯಲ್ಲಿ ವರ್ತಿಸುತ್ತಿದ್ದಾರೆ. ಇದರಿಂದ ಈಡಿ ಸಮಾಜ ನಿಜಕ್ಕೂ ಭಯದ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಸರ್ಕಾರ ತಕ್ಷಣವೇ ತಪ್ಪಿಸಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದರು.
ಇತ್ತೀಚೆಗೆ ಹುಬ್ಬಳ್ಳಿಯ ಕಾಲೇಜಿನಲ್ಲಿ ನಡೆದ ಕುಮಾರಿ ನೇಹಾ ಹಿರೇಮಠ ಅವರ ಕೊಲೆ ಪ್ರಕರಣ ಹಾಗೂ ದಾವಣಗೆರೆಯ ನಲ್ಲೂರಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮುಸ್ಲಿಮರಿಂದ ಮೂರು ಹಿಂದೂಗಳ ಮೇಲೆ ಮಾರಣಾಂತಿಕ ಹಲ್ಲೆ, ಅಲ್ಲದೆ ಚಿತ್ರದುರ್ಗ, ಬಾಗಲಕೋಟೆ ಹಾಗೂ ಇನ್ನಿತರ ಕಡೆ ನಡೆಯುತ್ತಿರುವಂತಹ ಪ್ರಕರಣಗಳನ್ನು ಖಂಡಿಸಿ ತಕ್ಷಣವೇ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸಿಸಬೇಕು ಎಂದು ಆಗ್ರಹಿಸಿದರು.
ಹಿಂದೂಗಳ ಮೇಲೆ ಇಷ್ಟೆಲ್ಲ ಪ್ರಕರಣಗಳು ನಡೆಯುತ್ತಿದ್ದರು ಕೂಡ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ.್ದ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಆದ್ದರಿಂದ ತಕ್ಷಣವೇ ರಾಷ್ಟ್ರಪತಿಯವರು ರಾಜ್ಯದಲ್ಲಿ ಆಳ್ವಿಕೆಗೆ ಶಿಫಾರಸು ಮಾಡಬೇಕು ಮತ್ತು ಪೊಲೀಸ್ ಮತ್ತು ಗೃಹ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ಜಾನಕೇರೆ ಹೇಮಂತ್, ತಾಲೂಕು ಅಧ್ಯಕ್ಷ ಮಹೇಶ್ ಕುಮಾರ್, ಮುಖಂಡರಾದ ವರುಣ್, ನವೀನ್, ಪ್ರದೀಪ್ ಇತರರು ಇದ್ದರು.