ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಗಾಂಧೀಜಿ ಪುತ್ಥಳಿಗೆ ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಪುಷ್ಪಾರ್ಚನೆ ಮಾಡಿದರು. 
ಜಿಲ್ಲೆ

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ

ಚಿಕ್ಕಮಗಳೂರು: ಕರ್ನಾಟಕದಲ್ಲಿ ಈಗಾಗಲೇ ಒಬ್ಬರು ಮುಖ್ಯಮಂತ್ರಿ ಇದ್ದಾರೆ. ಹೀಗಾಗಿ ಪ್ರಸ್ತುತ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಅದು ಖಾಲಿಯಾದ ಬಳಿಕವಷ್ಟೇ ಈ ಬಗ್ಗೆ ತೀರ್ಮಾನ ಮಾಡೋಣ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಗಾಂಧಿ ಜಯಂತಿ ಅಂಗವಾಗಿ ಗಾಂಧೀಜಿ ಪುತ್ಥಳಿಗೆ ಪುಷ್ಪಾರ್ಚನೆ ನೆರವೇರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಪಕ್ಷದ ಸಿಎಲ್‌ಪಿ ಸಭೆಯಲ್ಲಿ ಸಿಎಂ ಅವಧಿ ಎರಡು ಅಥವಾ ಮೂರು ವರ್ಷ ಎಂದು ನಿಗದಿಯಾಗಿಲ್ಲ. ಹೀಗಾಗಿ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದಾರೆ. ನಾನು ಎರಡು ವರ್ಷಕ್ಕೆ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಲು ಆಗುತ್ತದೆಯೇ ಎಂದು ಪ್ರಶ್ನಿಸಿದ ಅವರು, ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನ ಎಲ್ಲ ಶಾಸಕರು ಆಯ್ಕೆ ಮಾಡಿದ್ದಾರೆ. ಹೀಗಿರುವಾಗ ಕಾಲದ ಗಡುವು ಇರುವುದಿಲ್ಲ. ಬದಲಾವಣೆ ಮಾಡಬೇಕಾದರೆ ಸಿಎಲ್‌ಪಿ ನಾಯಕರು, ಹೈಕಮಾಂಡ್ ಇದ್ದಾರೆ. ಅವರು ಕ್ರಮ ಕೈಗೊಳ್ಳುತ್ತಾರೆ ಎಂದರು.

ಸಿಎA ಬದಲಾವಣೆ ಬಗ್ಗೆ ಮಾತನಾಡಲು ಮಾಜಿ ಸಂಸದ ಶಿವರಾಮೇಗೌಡ ಎಐಸಿಸಿ ಅಧ್ಯಕ್ಷರಾ ಅಥವಾ ಪ್ರಧಾನ ಕಾರ್ಯದರ್ಶಿಗಳಾ, ಇಲ್ಲವೇ ರಾಜ್ಯದ ಉಸ್ತುವಾರಿಯೇ ಎಂದು ಪ್ರಶ್ನಿಸಿದ ಅವರು, ಶಿವರಾಮೇಗೌಡ ಅವರ ಮಾತಿಗೆ ಅಷ್ಟೊಂದು ಪ್ರಾಮುಖ್ಯತೆ ಏಕೆ ಕೊಡುತ್ತೀರಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

ನಾವೆಲ್ಲ ಶಾಸಕರು ಶಾಸಕಾಂಗ ಸಭೆಯ ನಾಯಕನನ್ನ ಸೆಲೆಕ್ಟ್ ಮಾಡಿz್ದೆÃವೆ. ಈ ವೇಳೆ ೨-೩ ವರ್ಷ ಅವಧಿ ಎಂದು ಗಡುವು ಹಾಕಿಲ್ಲ. ಡಿ.ಕೆ.ಶಿವಕುಮಾರ್ ಅವರಿಗೂ ಸಿಎಂ ಆಗಲು ಏಕೆ ಅವಕಾಶವಿಲ್ಲ. ಎಲ್ಲರಿಗೂ ಅವಕಾಶವಿದೆ. ಆದರೆ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲವಷ್ಟೇ ಎಂದು ಪ್ರತಿಕ್ರಿಯಿಸಿದರು.