ಹಾಸನ : ರಾಜ್ಯಪಾಲರು ಬಿಜೆಪಿಯ ಕೈಗೊಂಬೆಂತೆ ವರ್ತಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಷಡ್ಯಂತರದಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯ ವಿರುದ್ಧ ಆ.19ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಂದು ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಹೇಳಿದರು.
ಥಾವರ್‌ಚಂದ್ ಗೆಹ್ಲೋಟ್ ಅವರು ರಾಜಭವನನ್ನು ಅಪವಿತ್ರ ಮಾಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ದೂರು ಬಂದ ತಕ್ಷಣ ಉನ್ನತ ಸಂಸ್ಥೆಗಳಿಂದ ತನಿಖೆ ನಡೆಸಿದ ಬಳಿಕ ನಿರ್ಧಾರ ತೆಗೆದುಕೊಳ್ಳುವ ಬದಲು ಯಾರೋ ಮೂರು ಜನರು ಖಾಸಗಿ ದೂರು ನೀಡಿದರು ಎಂಬ ಕಾರಣಕ್ಕೇ ಏಕಾಏಕಿ ಶೋಕಾಸ್ ನೋಟೀಸ್ ನೀಡಿದ್ದಾರೆ. ಆದ್ದರಿಂದ ಇಂದು ಬೆಳಿಗ್ಗೆ 11 ಗಂಟೆಗೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಿ, ವಾಮಮಾರ್ಗದಿಂದ ಅಧಿಕಾರ ಹಿಡಿಯಲು ಬಿಜೆಪಿಯವರು ರಾಜ್ಯಪಾಲರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ಸರಿಯಾದ ಕ್ರಮವಲ್ಲ ಎಂದರು.
ಮುಖ್ಯಮಂತ್ರಿ ವಿರುದ್ಧ ಯಾವುದೇ ವಿಚಾರಣೆಗೆ ಆದೇಶಿಸುವ ಮೊದಲು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಬೇಂದು ಕೇಂದ್ರ ಸರ್ಕಾರವೇ ಕಾನೂನು ರೂಪಿಸಿದೆ. ಅದನ್ನು ಮುರಿದಿರುವ ರಾಜ್ಯಪಾಲರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಹೋರಟಿದ್ದಾರೆ. ದೂರು ಬಂದ ತಕ್ಷಣ ಅದನ್ನು ಓದಿ, ಪ್ರಾಥಮಿಕ ತನಿಖೆ ನಡೆಸದೆ, ದೂರುದಾರರೊಂದಿಗೆ ಸೇರಿಕೊಂಡು ಸಿದ್ದರಾಮಯ್ಯ ಆರೋಪಿ ಎಂದು ಇವರೇ ತೀರ್ಮಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಷಡ್ಯಂತ್ರದ ರಾಜಕಾರಣ ಮಾಡುತ್ತಿದೆ. ಬಿಜೆಪಿ ಇತಿಹಾಸದಲ್ಲಿ ಎಂದೂ ಜನರಿಂದ ನೇರವಾಗಿ ಆಯ್ಕೆಯಾಗಿಲ್ಲ. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಹಿಂಭಾಗಿಲಿನಿಂದ ಅಧಿಕಾರ ಹಿಡಿದಿದ್ದರೆ. ಈಗಲೂ ಪ್ರಜಾಪ್ರಭುತ್ವದಡಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ವಾಮಮಾರ್ಗದಿಂದ ಅಧಿಕಾರ ಹಿಡಿಯಲು ಯತ್ನಿಸಲಾಗುತ್ತಿದೆ. ಇದು ಹೀಗೆ ಮುಂದುವರೆದರೆ ರಾಜ್ಯದಲ್ಲಿ ದೊಡ್ಡ ಮಟ್ಟದ ಆಂದೋಲನ ಆಂಭವಾಗುತ್ತದೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಈ.ಹೆಚ್. ಲಕ್ಷ್ಮಣ್, ಮುಖಂಡರಾದ ಬಾಗೂರು ಮಂಜೇಗೌಡ, ದೇವರಾಜೇಗೌಡ, ಮಲ್ಲಿಗೆವಾಳ್ ದ್ಯಾವಪ್ಪ, ಪಟೇಲ್ ಶಿವಪ್ಪ ಇದ್ದರು.
ಬೀದಿಗಿಳಿದು ಹೋರಾಟ: ಶ್ರೇಯಸ್ ಪಟೇಲ್
ಸಂಸದ ಶ್ರೇಯಸ್ ಪಟೇಲ್ ಅವರು ಮಾತನಾಡಿ, ರಾಜಕೀಯ ದುರುದ್ದೇಶದಿಂದ ಮುಖ್ಯಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂಬ ಅನುಮಾನ ಮೂಡಿದೆ. ಶಾಸಕರು, ಸಂದರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತು ನ್ಯಾಯ ಸಿಗುವವರೆಗೂ ಬೀದಿಗಿಳಿದು ಹೋರಾಟ ಮಾಡಲಿದ್ದೇವೆ. ಸಿದ್ದರಾಮಯ್ಯ ಅವರು ಯಾವ ಷಡ್ಯಂತ್ರಕ್ಕೂ ಹೆದರುವವರಲ್ಲ, ಅವರ ಹೆಸರಿಗೆ ಕಳಂಕ ತರುವ ಪ್ರಯತ್ನದ ವಿರುದ್ಧ ನಾವೆಲ್ಲರೂ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಹೋರಾಡಬೇಕಿದೆ. ಹಾಗಾಗಿ ಸೋಮವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ಹೋರಾಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸಬೇಕೆಂದು ಮನವಿ ಮಾಡಿದರು.
ಎಚ್‌ಡಿಕೆ ವಿರುದ್ಧ ಕೆಎಂಶಿ ವಾಗ್ದಾಳಿ :ಕುಮಾರಸ್ವಾಮಿಯವರು ಈ ಹಿಂದಿನಿಂದಲೂ ಕೂಡ ಸರ್ಕಾರಗಳ ಮೇಲೆ ಹಿಟ್ ಅಂಡ್ ರನ್ ರೀತಿ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಇದು ಅವರಿಗೆ ಹೊಸದೇನಲ್ಲ ಎಂದು ಎಚ್ಡಿಕೆ ವಿರುದ್ಧ ಶಿವಲಿಂಗೇಗೌಡ ವಾಗ್ದಾಳಿ ನಡೆಸಿದರು.
ಈ ಹಿಂದೆ ಕುಮಾರಸ್ವಾಮಿ ಅವರು ಯಾವ ರೀತಿ ಅಧಿಕಾರ ಹಿಡಿದಿದ್ದರು ಅವರು ಯಡಿಯೂರಪ್ಪ ಅವರಿಗೆ ಅಧಿಕಾರ ನೀಡಿದ ಸಂದರ್ಭದಲ್ಲಿ ರಾಜ್ಯದಲ್ಲಿ ಏನೆಲ್ಲಾ ನಡೆಯಿತು. ಎಂಬುದು ಎಲ್ಲರಿಗೆ ಗೊತ್ತಿದೆ. ಈಗ ಮತ್ತೆ ಬಿಜೆಪಿ ಜೊತೆ ಕೈಜೋಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ಕೈಗೊಂಡಿದ್ದರು ಇವರ ಆರೋಪದಲ್ಲಿ ಹುರಲಿಲ್ಲ, ಸಾಕ್ಷಿ ಸಮೇತ ಬಹಿರಂಗಪಡಿಸಲಿ, ನಾವು ಮೈಸೂರಿನಲ್ಲಿ ಸಮಾವೇಶ ನಡೆಸಿ ಎಲ್ಲಾ ಸಾಕ್ಷಿ ಪುಸ್ತಕ ಬಿಡುಗಡೆ ಮಾಡಿದ್ದಾವೆ ಎಂದರು.