ಜಿಲ್ಲೆ

ರಾಜ್ಯಪಾಲರ ವಿರುದ್ಧ ಸಿಪಿಐ ಪ್ರತಿಭಟನೆ


ಚಿತ್ರದುರ್ಗ: ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಕುತಂತ್ರವನ್ನು ಕೇಂದ್ರದ ಬಿಜೆಪಿ ಸರ್ಕಾರ ನಡೆಸುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಗುರುವಾರ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ‌್ಯಕ ರ್ತರು ಡಿಸಿ ಕಚೇರಿ ಬಳಿ ಪ್ರತಿಭಟಿಸಿದರು. ಪಕ್ಷದ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭ ಟನಾಕಾರರು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮೂಡಾ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಗಳ ತನಿಖೆಯನ್ನು ನಿಸ್ಪಕ್ಷಪಾತವಾಗಿ ತನಿಖೆ ನಡೆಸ ಬೇ ಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು, ಕೇಂದ್ರ ಬಿಜೆಪಿ ಸ ರ್ಕಾರದ ಏಜೆಂಟರಂತೆ ವರ್ತಿಸುತ್ತಿರುವುದು ಸಂವಿಧಾನ ವಿರೋಧಿ ಧೋರಣೆಯಾಗಿದೆ. ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸ ಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. 29ರಂದು ರಾಜ್ಯಪಾಲ ಹುದ್ದೆ ರದ್ದುಪಡಿಸಿ ಒಕ್ಕೂಟ ವ್ಯವಸ್ಥೆ ಉಳಿಸುವಂತೆ ಒತ್ತಾಯಿಸಿ ಎಂದು ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ಪಕ್ಷದ ರಾಜ್ಯಮಂಡಳಿ ಸದಸ್ಯ ಸಿ.ವೈ.ಶಿವರುದ್ರಪ್ಪ ಹೇಳಿದರು.
ಸಿಪಿಐ ಜಿಲ್ಲಾ ಕಾರ‌್ಯದರ್ಶಿ ಜಿ.ಸಿ.ಸುರೇಶ್‌ಬಾಬು,ಬಿ.ಬಸವರಾಜಪ್ಪ,ಟಿ.ಆರ್.ಉಮಾಪತಿ,ದೊಡ್ಡುಳ್ಳಾರ್ತಿ ಕರಿಯಣ್ಣ,ಜಾಫರ್‌ಷರೀ ಫ್,ಎಸ್.ಸಿ.ಕುಮಾರ್,ಎಲ್.ಸಿ.ಕುಮಾರ್,ಅಮೀನಾಭಿ,ಹನುಮಂತಪ್ಪ,ಇ.ಸತ್ಯಕೀರ್ತಿ,ಎಂ.ಬಿ.ಜಯದೇವಮೂರ್ತಿ ಮತ್ತಿತರರು ಪ್ರತಿಭಟನೆಯಲ್ಲಿದ್ದರು.