ಜಿಲ್ಲೆ

ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ:ಅಂಗವಿಕಲರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ,ಸಂಸ್ಥೆ ಮತ್ತು ವಿಶೇಷ ಶಾಲೆ ಶಿಕ್ಷಕರಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿ ದೆ. ಅಂಗವಿಕಲರ ಕ್ಷೇತ್ರದಲ್ಲಿ 15 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಶಿಕ್ಷಕರು,ಸಂಸ್ಥೆಗಳು,ಸಾಧನೆಗೈದ ಅಂಗವಿಕಲರು ಅರ್ಜಿ ಸಲ್ಲಿಸ ಬ ಹುದು. ಅರ್ಜಿಗಳನ್ನು www.dwdsc.kar.nic.in ಮೂಲಕ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳ ನ್ನು ಅಕ್ಟೋಬರ್ 15ರೊಳಗೆ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಗೆ ದ್ವಿಪ್ರತಿಯಲ್ಲಿ ಸಲ್ಲಿಸ ಬೇಕು. ಹೆಚ್ಚಿನ ಮಾಹಿತಿಗಾಗಿ 08194-235284 ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.