ಹಾಸನ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾ ಮಟ್ಟ ಮತ್ತು ರಾಜ್ಯಮಟ್ಟಕ್ಕೆ ಆಯ್ಕೆ ಆಗುವ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಎಸ್ ಮಂಜುಳಾ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಬ್ರಿಲಿಯಂಟ್ ಪಬ್ಲಿಕ್ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ನಗರ ಎ ವಲಯದ ಕ್ರೀಡಾಕೂಟವ್ನನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಕ್ರೀಡಾಪಟ್ಟುಗಳು ಉತ್ತಮ ತರಬೇತಿ ಪಡೆದು ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟದಲ್ಲಿ ಪಾಲ್ಗೊಂಡು ನಂತರ ರಾಜ್ಯ ಮಟ್ಟದಲ್ಲಿ ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಕರೆ ನೀಡಿದರು..
ಕ್ರೀಡಾಕೂಟಕ್ಕೆ ಉತ್ತಮವಾಗಿ ಸಿದ್ಧತೆ ಮಾಡಿಕೊಂಡಿದ್ದರು ಆದ್ದರೆ ಮಳೆ ಬಂದಿರುವುದು ಸಲ್ಪ ತೊಂದರೆ ಆಗಿದೆ.ಆದ್ದರೂ ಎಲ್ಲಾ ಕ್ರೀಡಾಪಟ್ಟುಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿರುವುದು ಸಂತೋಷ ತಂದಿದೆ. ಕ್ರೀಡೆಯಲ್ಲಿ ಸೋತವರು ಬೇಸರ ಮಾಡಿಕೊಳ್ಳದೇ ಮುಂದಿನ ವರ್ಷದಲ್ಲಿ ನಡೆಯುವ ಕ್ರೀಡೆಗೆ ತಯಾರು ಆಗಬೇಕು ಎಂದು ಕಿವಿಮಾತು ಹೇಳಿದರು.
್ಲ ಕ್ರೀಡೆಯಲ್ಲಿ ಹಾಸನ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿತ್ತು. ಈ ವರ್ಷವು ಕೂಡ ಅದೆ ಸ್ಥಾನವನ್ನು ಉಳಿಸಿಕೊಳ್ಳಬೇಕು. ಈ ಕ್ರೀಡಾಕೂಟದಲ್ಲಿ ಪ್ರಥಮ ಮತ್ತು ದ್ವಿತೀಯ ಬಂದವರು ತಾಲೂಕು ಮಟ್ಟದಿಂದ ರಾಜ್ಯ ಮಟ್ಟವನ್ನು ಪ್ರತಿನಿಧಿಸುವ ವೇಳೆ ಅತ್ಯುತ್ತಮವಾದ ತಬೇತಿ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು. ಇದಕ್ಕಾಗಿ ಯುವ ಸಬಲೀಕರಣ ಇಲಾಖೆಯವರು ಮತ್ತು ದೈಹಿಕ ಶಿಕ್ಷಣಾಧಿಕಾರಿಗಳು ನಿಮಗೆ ಸಹಕಾರ ಕೊಡಲಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಬರುವಾಗೆ ನೋಡಿಕೊಳ್ಳಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಾಣಾಧಿಕಾರಿ ಟಿ.ಎಂ. ವೇದರಾಜ್, ಬ್ರಿಲಿಯಂಟ್ ಪಬ್ಲಿಕ್ ಶಾಲೆ ಶೈಕ್ಷಣಿಕ ಸಲಹೆಗಾರ ಎಸ್. ವೆಂಕಟೇಶ್, ಬ್ರಿಲಿಯಂಟ್ ಪಬ್ಲಿಕ್ ಶಾಲೆ ಮುಖ್ಯಸ್ಥ ರಘು, ಮುಖ್ಯೋಪಾಧ್ಯಯ ಆರ್. ರಾಜೇಶ್ವರಿ ಇತರರು ಇದ್ದರು.