ಜಿಲ್ಲೆ

ರಾಜ್ಯಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಾಮರಾಜನಗರ: 2025-26ನೇ ಸಾಲಿಗೆ ಕೈಮಗ್ಗ ನೇಕಾರರ ಉತ್ಪನ್ನಗಳನ್ನು ಪ್ರೋತ್ಸಾಹಿಸಲು ಹಾಗೂ ಬೆಂಬಲ ನೀಡಲು ರೇಷ್ಮೆ, ಹತ್ತಿ ಮತ್ತು ಉಣ್ಣೆ ವಲಯದ ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಟತೆ, ತಾಂತ್ರಿಕತೆ, ಉತ್ಕೃಷ್ಟತೆ ಹೊಂದಿರುವ ಉತ್ಪನ್ನಕ್ಕೆ ರಾಜ್ಯಮಟ್ಟದ ಪ್ರಶಸ್ತಿ ನೀಡಲು ನೇಕಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಅರ್ಹ ಕೈಮಗ್ಗ ನೇಕಾರರು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಮತ್ತು ಸ್ವತಃ ಅರ್ಜಿದಾರ ನೇಕಾರರೇ ತಯಾರಿಸಿದ ಉತ್ಪನ್ನದ ಮಾದರಿ (ಸ್ಯಾಂಪಲ್) ಅನ್ನು ಟಿಪ್ಪಣಿ ಮತ್ತು ಉತ್ಪನ್ನಗಳನ್ನು ತಯಾರಿಸಿರುವ ಕುರಿತು ವೀಡಿಯೊದೊಂದಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಕಚೇರಿಗೆ ಮೇ 25ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯಲ್ಲಿರುವ ರೂಂ ನಂ. 222ರ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ದೂ.ಸಂ 08226-222883 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.