ಕಮಲನಗರದ ತಹಸಿಲ್ ಕಚೇರಿಯಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಕುರಿತು ಪೂರ್ವಭಾವಿ ಸಭೆ ನಡೆಯಿತು. ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ, ಗ್ರಾಪಂ ಅಧ್ಯಕ್ಷೆ ಸುಶೀಲಾ ಸಜ್ಜನ್, ಸಿಪಿಐ ಅಮರೆಪ್ಪ ಶಿವಬಲ್, ತಾಪಂ ಎಡಿ ಹಣಮಂತರಾಯ ಕೌಟಗೆ, ಕಸಾಪ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ, ಪ್ರೊ.ಎಸ್.ಎನ್.ಶಿವಣಕರ, ಟಿಎಚ್‌ಒ ಡಾ.ಗಾಯತ್ರಿ ವಿಜಯಕುಮಾರ ಇತರರಿದ್ದರು. 
ಜಿಲ್ಲೆ

ರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ

ಕಮಲನಗರ: ಪಟ್ಟಣದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ ಹೇಳಿದರು.

ತಹಸಿಲ್ ಕಚೇರಿಯಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಪಟ್ಟಣದಲ್ಲಿರುವ ಎಲ್ಲ ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಸೂಚಿಸಲಾಗುವುದು ಎಂದರು.

ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ರಾಜ್ಯೋತ್ಸವಕ್ಕೆ ಮೆರುಗು ತರಬೇಕು. ಉತ್ತಮ ಕಾರ್ಯಕ್ರಮಗಳನ್ನು ಪರಿಶೀಲಿಸಿ ಆಯ್ಕೆ ಮಾಡಬೇಕು. ವೇದಿಕೆ ಸಿದ್ಧತೆ, ಕುಡಿಯುವ ನೀರು, ಲಘು ಉಪಹಾರ ವ್ಯವಸ್ಥೆ ಮಾಡುವಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಹಸೀಲ್ದಾರ್ ಸೂಚಿಸಿದರು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ ಮಾತನಾಡಿ, ಕನ್ನಡ ನಾಡು, ನುಡಿ, ಪರಂಪರೆಯ ವೈಭವ ಬಿಂಬಿಸುವ ರೀತಿಯಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ತಾಪA ಸಹಾಯಕ ನಿರ್ದೇಶಕ ಹಣಮಂತರಾಯ ಕೌಟಗೆ, ಸಿಪಿಐ ಅಮರೆಪ್ಪ ಶಿವಬಲ್, ಪಿಎಸ್‌ಐ ಚಂದ್ರಶೇಖರ ನಿರ್ಣೆ, ತಾಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ ವಿಜಯಕುಮಾರ, ಬಿಆರ್‌ಪಿ ಶಶಿಕುಮಾರ ಬಿಡವೆ, ಕಸಾಪ ಗೌರವ ಅಧ್ಯಕ್ಷ ಪ್ರೊ.ಎಸ್.ಎನ್.ಶಿವಣಕರ, ಗ್ರಾಪಂ ಅಧ್ಯಕ್ಷೆ ಸುಶೀಲಾ ಸಜ್ಜನ್, ಕರವೇ ತಾಲೂಕು ಅಧ್ಯಕ್ಷ ಸುಭಾಷ ಗಾಯಕವಾಡ, ಯಶವಂತ ಬಿರಾದಾರ, ಧನರಾಜ ಭವರಾ, ಗೋವಿಂದರಾವ ತಾಂದಳೆ, ಪಿಡಿಒ ರಾಜಕುಮಾರ ತಂಬಾಕೆ, ಸಂತೋಷ ಸುಲಾಕೆ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.