ಶಹಾಬಾದ್: ತಾಲೂಕು ಆಡಳಿತದಿಂದ ಕಿತ್ತೂರ ರಾಣಿ ಚನ್ನಮ್ಮ ಜಯಂತ್ಯುತ್ಸವ ಹಾಗೂ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಹಸೀಲ್ದಾರ್ ಜಗದೀಶ ಚೌರ ಹೇಳಿದರು.
ತಹಸಿಲ್ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಿತ್ತೂರ ರಾಣಿ ಚನ್ನಮ್ಮ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕಿನ ಎಲ್ಲ ಕಚೇರಿಗಳಲ್ಲಿ ಕಡ್ಡಾಯವಾಗಿ ಚನ್ನಮ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಯಂತಿ ಆಚರಿಸಬೇಕು. ಸರ್ಕಾರದ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಸೂಚನೆ ನೀಡಿದರು.
ಕನ್ನಡಪರ ಹೋರಾಟಗಾರ ವಿಶ್ವರಾಜ ಫಿರೋಜಾಬಾದ್ ಮಾತನಾಡಿ, ತಾಲೂಕಿನಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಐವರನ್ನು ಗುರುತಿಸಿ ಪ್ರಶಸ್ತಿ ನೀಡುವುದು ಅಥವಾ ಸನ್ಮಾನಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಕರವೇ ತಾಲೂಕ ಅಧ್ಯಕ್ಷ ಯಲ್ಲಾಲಿಂಗ ಹೈಯಾಳಕರ್ ಕನ್ನಡ ನಾಡು, ನುಡಿ ಕುರಿತು ಪರಿಣಿತ ಉಪನ್ಯಾಸಕರಿಂದ ಭಾಷಣ ಮಾಡಿಸಬೇಕು. ಶಾಲಾ ಮಕ್ಕಳು ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಕುಡಿವ ನೀರು, ಊಟದ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.
ವಿಕಲಚೇತನರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ ಭಜಂತ್ರಿ, ಕೆ.ರಮೇಶ ಭಟ್ಟ, ಲೋಹಿತಿ ಕಟ್ಟಿ ಮಾತನಾಡಿದರು. ನಗರಸಭೆ ಪೌರಾಯುಕ್ತ ಡಾ.ಕೆ.ಗುರುಲಿಂಗಪ್ಪ, ಪಿಎಸ್‌ಐ ಚಂದ್ರಕಾAತ ಮೆಕಾಲೆ, ಅಧಿಕಾರಿಗಳಾದ ಡಾ.ವಿಜಯಲಕ್ಷ್ಮೀ, ಡಾ.ಮಾರುತಿ, ಶಂಕರಲಿAಗ, ಶರಣಪ್ಪ ಅರಿಗಂ, ರಾಜೇಶ, ಅಂಬ್ರಯ್ಯ, ಶೀಲಾ, ಚೇತನ, ಈರಪ್ಪ, ಶರಣಬಸಪ್ಪ ಕೋಬಾಳ, ಶರಣು ವಸ್ತçದ, ನಿಂಗಣ್ಣ ಜಂಬಗಿ, ಲಾಲ್ ಅಹ್ಮದ್ ಇತರರಿದ್ದರು.