ಜಿಲ್ಲೆ

ರಾಜ್ಯೋತ್ಸವ ಕಾರ್ಯಕ್ರಮ 27ರಂದು

ಬೀದರ್: ಜೈ ಕರ್ನಾಟಕ ರಕ್ಷಣಾ ವೇದಿಕೆ, ಸ್ನೇಹಾ ಕಲ್ಚರಲ್ ಫೌಂಡೇಷನ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನ.27ರಂದು ಮಧ್ಯಾಹ್ನ 2ಕ್ಕೆ ನಗರದ ರಂಗಮಂದಿರದಲ್ಲಿ 65ನೇ ರಾಜ್ಯೋತ್ಸವ ಆಯೋಜಿಸಲಾಗಿದೆ. ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು, ಶ್ರೀ ಹವಾ ಮಲ್ಲಿನಾಥ ಮಹಾರಾಜ ನಿರಗುಡಿ, ಶ್ರೀ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಉದ್ಘಾಟಿಸುವರು. ಜೈ ಕರವೇ ಸಂಸ್ಥಾಪಕ ಅಧ್ಯಕ್ಷ ಅರುಣಕುಮಾರ ಪಾಟೀಲ್ ಧ್ವಜಾರೋಹಣ ನೆರವೇರಿಸುವರು. ಸಹಕಾರ ಆಸ್ಪತ್ರೆ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಅಧ್ಯಕ್ಷತೆ ವಹಿಸುವರು. ಸಂಸದ ಭಗವಂತ ಖೂಬಾ ಸೇರಿ ಜನಪ್ರತಿನಿಧಿಗಳು, ಗಣ್ಯರು ಪಾಲ್ಗೊಳ್ಳುವರು. ಈ ವೇಳೆ ಹಲವು ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಜೈ ಕರವೇ ಜಿಲ್ಲಾಧ್ಯಕ್ಷ ಶ್ರೀಮಂತ ಸಪಾಟೆ ತಿಳಿಸಿದ್ದಾರೆ.