ಜಿಲ್ಲೆ

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಧಂಗಾಪುರ ಅವರಿಗೆ ಸನ್ಮಾನ

ಕಲಬುರಗಿ: ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ್ ಧಂಗಾಪುರ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಯಾದ ಹಿನ್ನೆಲೆಯಲ್ಲಿ ಜಂಟಿ ಕೃಷಿ ನಿರ್ದೇಶಕರು ಹಾಗೂ ಇಲಾಖಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

ಜಂಟಿ ಕೃಷಿ ನಿರ್ದೇಶಕ ರತೀಂದ್ರನಾತ ಸುಗೂರ, ಸಹಾಯಕ ಕೃಷಿ ನಿರ್ದೇಶಕಿ ಮಧುಮತಿ ಪಾಟೀಲ್, ಕಚೇರಿ ಅಧೀಕ್ಷಕ ಖುರ್ಷಿದ ಅಕ್ರಂ, ತಾಂತ್ರಿಕ ಕೃಷಿ ಅಧಿಕಾರಿಗಳಾದ ಜಹಾಂಗೀರ್ ಆಲಗೂರ, ಮಂಜುನಾಥ್ ಸಜ್ಜನ್, ಶೇಖಪ್ಪ ತಳವಾರ ಸೇರಿದಂತೆ ಮುಂತಾದವರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಜಂಟಿ ಕೃಷಿ ನಿರ್ದೇಶಕ ರವೀಂದ್ರನಾಥ ಸೂಗುರ ಮಾತನಾಡಿ, ಸಿದ್ರಾಮಪ್ಪ ಪಾಟೀಲ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಕೃಷಿ ಕ್ಷೇತ್ರಕ್ಕೆ ಸಂದ ಗೌರವವಾಗಿದೆ ಎಂದರು.