ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಬುಧವಾರ ಗೋಂದಲಿ ಸಮಾಜದ ಭಕ್ತರು ಶ್ರೀ ಚಾಮುಂಡೇಶ್ವರಿ ದೇವಿ ಉತ್ಸವದಲ್ಲಿ ಸಾಗಿದರು. 
ಜಿಲ್ಲೆ

ರಾಮನಾಥಪುರದಲ್ಲಿ ಚಾಮುಂಡೇಶ್ವರಿ ದೇವಿ ಉತ್ಸವ

ಅರಕಲಗೂಡು: ತಾಲೂಕಿನ ರಾಮನಾಥಪುರದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿ ಉತ್ಸವ ಬುಧವಾರ ಸಡಗರ ಸಂಭ್ರಮಗಳಿಂದ ನೆರವೇರಿತು.

ಗೋಂದಲಿ ಸಮಾಜದ ಭಕ್ತರು ಕಾವೇರಿ ನದಿ ದಂಡೆ ಮೇಲೆ ಶ್ರೀ ರಾಮೇಶ್ವರ ದೇವಸ್ಥಾನ ಸನ್ನಿಧಿಯಲ್ಲಿ ಶ್ರೀ ಚಾಮುಂಡೇಶ್ವರಿ ದೇವಿ ಪ್ರತಿಷ್ಠಾಪಿಸಿ ಧಾರ್ಮಿಕ ವಿಧಾನಗಳನ್ವಯ ಪೂಜಾ ಕಾರ್ಯಗಳನ್ನು ನೆರವೇರಿಸಿದರು.

ಬಳಿಕ ಅಲಂಕೃತ ವಾಹನದಲ್ಲಿ ದೇವರ ಉತ್ಸವ ಮೂರ್ತಿ ಕೂರಿಸಿ ಪ್ರಮುಖ ಬೀದಿಗಳಲ್ಲಿ ಅದ್ದೂರಿ ಮೆರವಣಿಗೆ ನಡೆಸಿದರು. ಮೆರವಣಿಗೆ ವೇಳೆ ಮಹಿಳೆಯರು, ಯುವಕರು ಜಿಟಿ ಜಿಟಿ ಮಳೆಯಲ್ಲೇ ಡಿಜೆ ಸೌಂಡ್ಸ್ ಹಾಡಿಗೆ ಹೆಜ್ಜೆ ಹಾಕಿ ಕುಣಿದು ಸಂಭ್ರಮಿಸಿದರು.