ಬೀದರ್: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀ ರಾಮ ಮಂದಿರಕ್ಕೆ ಇಲ್ಲಿಯ ಗುರುನಾನಕ ಝೀರಾ ಪ್ರಬಂಧಕ ಸಮಿತಿ ಅಧ್ಯಕ್ಷ ಡಾ. ಸರ್ದಾರ್ ಬಲಬೀರಸಿಂಗ್ ಅವರು ರು. 5 ಲಕ್ಷ ದೇಣಿಗೆ ನೀಡಿದ್ದಾರೆ.
ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೆಸರಿಗೆ ಬರೆದ ರು. 5 ಲಕ್ಷ ಮೊತ್ತದ ಚೆಕ್ ಅನ್ನು ನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಹಣಮಂತರಾವ ಪಾಟೀಲ್ ಅವರಿಗೆ ನೀಡಿದರು.
ರಾಮಮಂದಿರ ದೇಶದ ಪುನರುತ್ಥಾನದ ಮಂದಿರವಾಗಲಿದೆ. ಇದಕ್ಕೆ ಸಮಾಜದ ಎಲ್ಲ ವರ್ಗದವರು ಸ್ವಯಂ ಇಚ್ಛೆಯಿಂದ ದೇಣಿಗೆ ನೀಡುವ ಮೂಲಕ ದೇಶ ಕಟ್ಟುವ ಕಾರ್ಯಕ್ಕೆ ಕೈಜೋಡಿಸಿದ್ದಾರೆ ಎಂದು ಹಣಮಂತರಾವ ಪಾಟೀಲ್ ಹೇಳಿದರು.
ಮುಖಂಡ ಪ್ರಕಾಶ ಟೊಣ್ಣೆ, ನಿವೃತ್ತ ಪ್ರಾಚಾರ್ಯ ಪ್ರೊ. ಎಸ್.ಬಿ. ಸಜ್ಜನಶೆಟ್ಟಿ, ಗುಲ್ಬರ್ಗ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪ್ರತಿಭಾ ಚಾಮಾ ಇದ್ದರು.